ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ; ಮುಸ್ಲಿಂ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು: ಕೆ ಎಸ್ ಈಶ್ವರಪ್ಪ

ನಗರದ ಕೋಟೆ ಕೆರೆಯ ದಡದ ಪಕ್ಕ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ತಿಳಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ಹಲ್ಲೆಗೊಳಗಾದ ಯುವಕ, ಯುವತಿಗೆ ಧೈರ್ಯ ತುಂಬಿದ್ದಾರೆ.
ಕೆ ಎಸ್ ಈಶ್ವರಪ್ಪ
ಕೆ ಎಸ್ ಈಶ್ವರಪ್ಪ

ಬೆಳಗಾವಿ: ನಗರದ ಕೋಟೆ ಕೆರೆಯ ದಡದ ಪಕ್ಕ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ತಿಳಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ಹಲ್ಲೆಗೊಳಗಾದ ಯುವಕ, ಯುವತಿಗೆ ಧೈರ್ಯ ತುಂಬಿದ್ದಾರೆ.

ಘಟನಾ ಸ್ಥಳಕ್ಕೆ ಮಾರ್ಕೆಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 17 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆ ಸೇರಿ 10 ಕಲಂ ಅಡಿ ದೂರು ನೀಡಲಾಗಿತ್ತು. ಸದ್ಯ ಪೊಲೀಸರು 7 ಜನ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದು ಅವರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ತಲೆಮರೆಸಿಕೊಂಡ ಆರೋಪಿಗಳ ವಶಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮಾಜಿ ಸಚಿವ, ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಭೇಟಿ: ನೈತಿಕ ಪೊಲೀಸ್ ಗಿರಿಯಲ್ಲಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಸೋದರ-ಸೋದರಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ. ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. 

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಈ ಘಟನೆ ಬಗ್ಗೆ ತಕ್ಷಣ ಸಿಎಂ, ಗೃಹ ಸಚಿವರು ಗಮನ ಹರಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಯುವಕನಿಗೆ ಹೊಡೆದಿರುವ ವಿಡಿಯೊ ನೋಡಿದ್ದೇನೆ. ಮುಸ್ಲಿಂ ಗೂಂಡಾಗಳನ್ನು ತಕ್ಷಣ ಬಂಧಿಸಬೇಕು. ಹಲ್ಲೆಗೊಳಗಾದವರಿಗೆ ಸರ್ಕಾರ ಸೂಕ್ತ ಸೌಲಭ್ಯ ಮತ್ತು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಬೆಳಗಾವಿ ತಾಲೂಕಿನ ನಿವಾಸಿಗಳಾದ 24 ವರ್ಷದ ಯುವತಿ, 21 ವರ್ಷದ ಯುವಕ ಯುವನಿಧಿ ಅರ್ಜಿ ಸಲ್ಲಿಸಲು ಬಂದಿದ್ದರು. ಯುವತಿ ಮುಖಕ್ಕೆ ಬಟ್ಟೆ ಕಟ್ಟಿದ್ದಳು, ಯುವಕ ಹಣೆಗೆ ತಿಲಕ ಇಟ್ಟುಕೊಂಡಿದ್ದನು. ಇವರನ್ನು ಕಂಡ ಅನ್ಯಕೋಮಿನ 16 ಜನ ಯುವಕರ ಗ್ಯಾಂಗ್​ ಹಿಂದೂ‌ ಯುವಕ, ಮುಸ್ಲಿಂ ಯುವತಿ ಪ್ರೇಮಿಗಳೆಂದು ಭಾವಿಸಿ ಥಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com