
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾನುವಾರ 329 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,181ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 329 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ಇಂದು ಓರ್ವ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಕೋವಿಡ್ ನಿಂದ 283 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3,819 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 8.61ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು 177 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು 27, ಬಾಗಲಕೋಟೆ 10, ಹಾಸನ 17, ಬೆಂಗಳೂರು ಗ್ರಾಮಾಂತರ 8, ಚಾಮರಾಜನಗರ 5, ತುಮಕೂರು 16 ಪ್ರಕರಣ ಸೇರಿದಂತೆ ಒಟ್ಟು 329 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Advertisement