ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಸೋದರ-ಸೋದರಿ ಮೇಲೆ ಅನ್ಯಕೋಮಿನವರಿಂದ ಹಲ್ಲೆ, 7 ಮಂದಿ ವಶಕ್ಕೆ

ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದ ಸೋದರ-ಸೋದರಿಯನ್ನು ಪ್ರೇಮಿಗಳೆಂದು ಭಾವಿಸಿ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ ನಡೆಸಿರುವ ಘಟನೆ ಬೆಳಗಾವಿಯ ಕೋಟೆ ಕರೆ ಆವರಣದಲ್ಲಿ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದ ಸೋದರ-ಸೋದರಿಯನ್ನು ಪ್ರೇಮಿಗಳೆಂದು ಭಾವಿಸಿ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ ನಡೆಸಿರುವ ಘಟನೆ ಬೆಳಗಾವಿಯ ಕೋಟೆ ಕರೆ ಆವರಣದಲ್ಲಿ ನಡೆದಿದೆ. 

ನಡೆದ ಘಟನೆಯೇನು?: ಬೆಳಗಾವಿ ತಾಲೂಕಿನ ನಿವಾಸಿಗಳಾದ 24 ವರ್ಷದ ಯುವತಿ, 21 ವರ್ಷದ ಯುವಕ ಯುವನಿಧಿ ಅರ್ಜಿ ಸಲ್ಲಿಸಲು ಬಂದಿದ್ದರು. ಯುವತಿ ಮುಖಕ್ಕೆ ಬಟ್ಟೆ ಕಟ್ಟಿದ್ದಳು, ಯುವಕ ಹಣೆಗೆ ತಿಲಕ ಇಟ್ಟುಕೊಂಡಿದ್ದನು. ಇವರನ್ನು ಕಂಡ ಅನ್ಯಕೋಮಿನ 16 ಜನ ಯುವಕರ ಗ್ಯಾಂಗ್​ ಹಿಂದೂ‌ ಯುವಕ, ಮುಸ್ಲಿಂ ಯುವತಿ ಪ್ರೇಮಿಗಳೆಂದು ಭಾವಿಸಿ ಥಳಿಸಿದ್ದಾರೆ.

ನಂತರ ಹತ್ತಿರವೊಂದರ ಕೊಠಡಿಯಲ್ಲಿ 2-3 ಗಂಟೆಗಳ ಕಾಲ ಕೂಡಿ ಹಾಕಿ ಚಿತ್ರಹಿಂಸೆ ಕೊಟ್ಟಿದ್ದಾರೆ. ಬಳಿಕ ಯುವತಿ ಮೊಬೈಲ್ ನಿಂದ ಕುಟುಂಬಸ್ಥರಿಗೆ ಕರೆ‌‌ ಮಾಡಿದ್ದಾರೆ. ಆಗ ಕುಟುಂಬಸ್ಥರು ಅವರಿಬ್ಬರು ಸಹೋದರಿ, ಸಹೋದರರು ಅಂತ ಹೇಳಿದರೂ ನಂಬದೆ, ಮೊಬೈಲ್ ಸ್ವೀಚ್ ಆಫ್ ಮಾಡಿ ಮತ್ತೆ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಯುವಕ ಮತ್ತು ಯುವತಿ ತಾವು ಸಹೋದರಿ, ಸಹೋದರ ಅಂತಾ ಹೇಳಿದರೂ ದುಷ್ಕರ್ಮಿಗಳು ನಂಬಿಲ್ಲ.

ಕೂಡಲೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮೊಬೈಲ್​ ಲೋಕೇಶ್ ಆಧರಿಸಿ ಘಟನಾ ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ರಕ್ಷಿಸಿ ಪರಿಸ್ಥಿತಿ ತಿಳಿಗೊಳಿಸಿದರು. 16 ಜನರಲ್ಲಿ ಓರ್ವ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಭೀರ ಗಾಯಗೊಂಡ ಯುವತಿ ಮತ್ತು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com