ಮೈಸೂರು: ಮಹಾರಾಜ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಪ್ರಮೀಳಾ ಕುನ್ನೂರ್ ನಿಧನ

ಮಹಾರಾಜ ಕಾಲೇಜಿನ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಪ್ರಮೀಳಾ ಕುನ್ನೂರ್ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಪ್ರಮೀಳಾ ಕುನ್ನೂರ್
ಪ್ರಮೀಳಾ ಕುನ್ನೂರ್
Updated on

ಮೈಸೂರು: ಮಹಾರಾಜ ಕಾಲೇಜಿನ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಪ್ರಮೀಳಾ ಕುನ್ನೂರ್ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.

ಧಾರವಾಡದಲ್ಲಿರುವ ಅವರ ಸ್ವಗೃಹದಲ್ಲಿ ಹೃದಯಾಘಾತದಿಂದ  ಶನಿವಾರ ರಾತ್ರಿ ನಿಧನರಾಗಿದ್ದು, ಭಾನುವಾರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಿತು. ಅವರು ತಮ್ಮ ಪತಿ ಮತ್ತು ಸಂಬಂಧಿಕರು, ಸ್ನೇಹಿತರು ಹಾಗೂ ತಮ್ಮ ಅಪಾರ ವಿದ್ಯಾರ್ಥಿ ಬಳಗವನ್ನು ಬಿಟ್ಟು ಅಗಲಿದ್ದಾರೆ.

ಪ್ರಮೀಳಾ ಕುನ್ನೂರ್ ಕರ್ನಾಟಕ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮೊದಲ ಬ್ಯಾಚಿನ (1982) ವಿದ್ಯಾರ್ಥಿನಿ ಮತ್ತು ಈ ವಿಭಾಗದಿಂದ ಪಿಹೆಚ್ ಡಿ ಪಡೆದವರಲ್ಲಿ ಮೊದಲಿಗರಾಗಿದ್ದ ಇವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 1990-94 ರಲ್ಲಿ ಅತಿಥಿ ಅಧ್ಯಾಪಕರಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು.

ನಂತರ  ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ 1994 ರಲ್ಲಿ ಉಪನ್ಯಾಸಕರಾಗಿ ನೇಮಕಗೊಂಡು 27 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸುಮಾರು 10 ಅಭ್ಯರ್ಥಿಗಳು ಪಿಎಚ್‌ಡಿ ಪಡೆದಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com