ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ; ಬೊಮ್ಮಾಯಿ

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ  ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಹುಬ್ಬಳ್ಳಿ: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ  ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಇದು ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ. ಕರ್ನಾಟಕದಲ್ಲಿ ಜನರಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಕೇಸ್ ಒಂದು. ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಒಳಗಡೆ ಹಾಕಿದರು. ಇದು ಎಮರ್ಜೆನ್ಸಿಯಲ್ಲಿ ಮಾತ್ರ ಸಾಧ್ಯ ಎಂದರು.

ರಾಜ್ಯದಲ್ಲಿ ಭಯ ಹುಟ್ಟಿಸುವ ಹಲವಾರು ಘಟನೆಗಳು ಪದೇಪದೇ ನಡೆಯುತ್ತಿವೆ. ಶ್ರೀಕಾಂತ ಪೂಜಾರಿ ವಿರುದ್ಧ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಬಂಧಿಸಲಾಗಿತ್ತು. ಗಲಭೆ ಪ್ರಕರಣಕ್ಕೆ ಸಂಬಂಧಿಸಿಯೂ ಅವರ ಮೇಲೆ‌ ಪ್ರಕರಣಗಳಿಲ್ಲ. ಪ್ರಕರಣಗಳಿಲ್ಲದೆ ಬಂಧಿಸಿ ಜೈಲಿಗೆ ಕಳುಹಿಸುವುದು ಎಮರ್ಜೆನ್ಸಿಯಲ್ಲಿ ಮಾತ್ರ ಆಗುತ್ತಿತ್ತು. ಅದೇ ಮಾದರಿ ಈಗ ನಡೆಯುತ್ತಿದೆ ಎಂದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬಾರದು ಎನ್ನುವ ಕಾಂಗ್ರೆಸ್ ಕನಸು ಭಗ್ನ ಆಗುತ್ತಿದೆ. ಅದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಕಾಂಗ್ರೆಸ್ ಆಡಳಿತದ ಎಲ್ಲ‌ ರಾಜ್ಯಗಳಲ್ಲೂ ಹೀಗೆ ಗದ್ದಲ ಆಗುತ್ತಿದೆ' ಎಂದರು.

ರಾಜ್ಯ ಕಾಂಗ್ರೆಸ್ಸಿಗರ ಅಧಿಕಾರದ ಮದ ಹಾಗೂ ಅಹಂಕಾರದ ವರ್ತನೆಯನ್ನು ಜನ ಬಹಳ ದಿನ ಸಹಿಸುವುದಿಲ್ಲ. ಹೀಗಾಗಿಯೇ ಎಮರ್ಜೆನ್ಸಿ ವಿರುದ್ಧ ಜನ ಸಿಡಿದೆದ್ದು ಬದಲಾವಣೆ ತಂದಿದ್ದು. ಜನವಿರೋಧಿ, ಅಭಿವೃದ್ಧಿ ಶೂನ್ಯ‌, ಆಡಳಿತದ ವೈಫಲ್ಯ ಮುಚ್ಚಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ. ಈ ಕುರಿತು ನಾವು ಸುದೀರ್ಘ ಹೋರಾಟ ಮಾಡುತ್ತೇವೆ.‌ ಜ.‌ 8ರಂದು ಚಿಂತನ ಮಂಥನ ಸಭೆ ನಡೆಯಲಿದ್ದು, ಅಲ್ಲಿ ಈ ಎಲ್ಲ ವಿಷಯಗಳ ಕುರಿತು ಚರ್ಚಿಸುತ್ತೇವೆ' ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com