ವಿಜಯನಗರ: ಕಲುಷಿತ ನೀರು ಕುಡಿದು ಮಹಿಳೆ ಸಾವು, ಮೂವರು ಅಧಿಕಾರಿಗಳು ಅಮಾನತು

ವಿಜಯನಗರ ಜಿಲ್ಲೆಯ ಹೊಸಪೇಟೆ ಪುರಸಭೆ ವ್ಯಾಪ್ತಿಯ ಕಾರಗನೂರು ಗ್ರಾಮದಲ್ಲಿ ಕಲಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದು, 35 ಮಂದಿ ಅಸ್ವಸ್ಥರಾಗಿದ್ದಾರೆ. 
ಸಚಿವ ಜಮೀರ್ ಅಹ್ಮದ್ ಖಾನ್
ಸಚಿವ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ವಿಜಯನಗರ ಜಿಲ್ಲೆಯ ಹೊಸಪೇಟೆ ಪುರಸಭೆ ವ್ಯಾಪ್ತಿಯ ಕಾರಗನೂರು ಗ್ರಾಮದಲ್ಲಿ ಕಲಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದು, 35 ಮಂದಿ ಅಸ್ವಸ್ಥರಾಗಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸೂಚಿಸಿದ್ದಾರೆ.

ಹೊಸಪೇಟೆ ಪಟ್ಟಣ ಪುರಸಭೆಯ ಆಯುಕ್ತ ಬಂಡಿ ವಡ್ಡರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ್ ಮತ್ತು ಕಿರಿಯ ಎಂಜಿನಿಯರ್ ಖಾಜಿ ಅವರನ್ನು ಅಮಾನತು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಶಿಫಾರಸು ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಇಲಾಖೆ ವಿಚಾರಣೆ ನಡೆಸುವಂತೆಯೂ ಸಚಿವ ಖಾನ್ ಸೂಚನೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದಿವಾಕರ್ ಅವರ ಜತೆ ನಿರಂತರ ಸಂಪರ್ಕ ದಲ್ಲಿದ್ದು ಮಾಹಿತಿ ಪಡೆದು ಪ್ರಕರಣ ಮರು ಕಳಿಸದಂತೆ ಎಲ್ಲ ರೀತಿಯ ಮುನ್ನಚ್ಚರಿಕೆ ವಹಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com