ಹಣ ಅಕ್ರಮ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನಿವಾಸದ ಮೇಲೆ ಇ.ಡಿ ದಾಳಿ

ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ನಿವಾಸ ಮತ್ತು ಅವರಿಗೆ ಸಂಬಂಧಿಸಿದ ಕೆಲವು ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ನಿವಾಸ ಮತ್ತು ಅವರಿಗೆ ಸಂಬಂಧಿಸಿದ ಕೆಲವು ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

61 ವರ್ಷದ ಶಾಸಕರು ಕರ್ನಾಟಕ ವಿಧಾನಸಭೆಯಲ್ಲಿ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟ (ಕೋಚಿಮುಲ್) ಅಧ್ಯಕ್ಷರೂ ಆಗಿದ್ದಾರೆ. 

ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತನಿಖೆಯ ಭಾಗವಾಗಿ ಮಾಲೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಅವರ ನಿವಾಸ ಮತ್ತು ಅವರಿಗೆ ಸಂಬಂಧಿಸಿದ ಕೆಲವು ಸ್ಥಳಗಳ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕೆಲವು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಆಧಾರದ ಮೇಲೆ ಇ.ಡಿ ಪ್ರಕರಣವನ್ನು ದಾಖಲಿಸಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ನೇಮಕಾತಿ ವಿಚಾರದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com