ನಟ ಯಶ್ ಅಭಿಮಾನಿಗಳ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ, ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ

ರಾಕಿಂಗ್ ಸ್ಟಾರ್ ಯಶ್ (Rocking star Yash) ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.
ಮೃತ ಯಶ್ ಅಭಿಮಾನಿ ಯುವಕರು
ಮೃತ ಯಶ್ ಅಭಿಮಾನಿ ಯುವಕರು

ಗದಗ: ರಾಕಿಂಗ್ ಸ್ಟಾರ್ ಯಶ್ (Rocking star Yash) ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.

ಸಾಮೂಹಿಕ ಅಂತ್ಯಸಂಸ್ಕಾರ: ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನ ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ನೆರವೇರಿಸಲಾಯಿತು. 

ಪರಿಹಾರ: ಮೃತ ಯುವಕರ ಕುಟುಂಬದವರು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ನಡೆಸುವವರಾಗಿದ್ದಾರೆ. ಅವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. 

ಇಂದು ಸಂಜೆ ನಟ ಯಶ್ ಭೇಟಿ: ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳು ದಾರುಣವಾಗಿ ಮೃತಪಟ್ಟ ಘಟನೆ ಬಗ್ಗೆ ನಟ ಯಶ್ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ. ತಮ್ಮ ಮುಂಬರುವ ಚಿತ್ರದ ಕೆಲಸದ ಮೇಲೆ ವಿದೇಶಕ್ಕೆ ತೆರಳುವುದಾಗಿ ಈ ಹಿಂದೆಯೇ ಹೇಳಿದ್ದ ಯಶ್ ಈ ಘಟನೆ ನಡೆದ ಹಿನ್ನೆಲೆಯಲ್ಲಿ ವಿಶೇಷ ವಿಮಾನ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಗದಗಕ್ಕೆ ಬಂದು ಅಲ್ಲಿಂದ ರಸ್ತೆ ಮಾರ್ಗ ಮೂಲಕ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com