ಜ.22ರಂದು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ: ಸರ್ಕಾರದ ನಡೆ ಸ್ವಾಗತಿಸಿದ ಬಿಜೆಪಿ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಟಿ ರವಿಯವರು, ಇದು ಉತ್ತಮ ನಿರ್ಧಾರ. ಇದಕ್ಕೆ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳುತ್ತೇವೆ. ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಬುದ್ಧಿ ಬಂದಿದೆ. ರಾಮ ಎಲ್ಲರಿಗೂ ಸೇರಿದವನಾಗಿದ್ದಾನೆ. ರಾಮನನ್ನು ತೊರೆದಿದ್ದ ಕಾಂಗ್ರೆಸ್ ಇದೀಗ ರಾಮನ ಬಳಿಗೆ ಬರುತ್ತಿದೆ. ಇದು ಒಳ್ಳೆಯದು. ದೇಶಕ್ಕೂ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವರ ಪ್ರಹ್ಲಾದ್ ಜೋಶಿಯವರು ಪ್ರತಿಕ್ರಿಯಿಸಿ, ಕಾಂಗ್ರೆಸ್'ಗೆ ಇದೀಗ ಬುದ್ಧಿ ಬಂದಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥನಾರಾಯಣ್ ಅವರು ಮಾತನಾಡಿ, ಸರ್ಕಾರ ಉತ್ತಮ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದಾದ್ಯಂತ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ನಾನು ಪ್ರಶಂಸಿಸುತ್ತೇನೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com