ಅಬುಧಾಬಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕನಿಂದ 98.68 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ಕಸ್ಟಮ್ಸ್ ಅಧಿಕಾರಿಗಳು ಅಬುಧಾಬಿಯಿಂದ ಬಂದ ಪ್ರಯಾಣಿಕರೊಬ್ಬರಿಂದ 98 ಲಕ್ಷ ರೂ.ಗೂ ಕ್ಕೂ ಅಧಿಕ ಮೌಲ್ಯದ 1.579 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ಕಸ್ಟಮ್ಸ್ ಅಧಿಕಾರಿಗಳು ಅಬುಧಾಬಿಯಿಂದ ಬಂದ ಪ್ರಯಾಣಿಕರೊಬ್ಬರಿಂದ 98 ಲಕ್ಷ ರೂ.ಗೂ ಕ್ಕೂ ಅಧಿಕ ಮೌಲ್ಯದ 1.579 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಕಸ್ಟಮ್ಸ್ ಈ ಬಗ್ಗೆ ಪ್ರಕಟಣೆ ನೀಡಿದ್ದು, ಅಬುಧಾಬಿ-ಮಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಪ್ರಯಾಣಿಕರೊಬ್ಬರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರ ಗುದನಾಳದಲ್ಲಿ ಐದು ಅಂಡಾಕಾರದ ವಸ್ತುಗಳನ್ನು ಬಚ್ಚಿಟ್ಟಿರುವುದು ಪತ್ತೆಯಾಗಿದೆ ಎಂದಿದೆ.

ಈ ವಸ್ತುಗಳು ಪೇಸ್ಟ್ ರೂಪದಲ್ಲಿದ್ದ 1.579 ಕೆಜಿ ತೂಕದ 98,68,750 ರೂ. ಮೌಲ್ಯದ ಚಿನ್ನವನ್ನು ಹೊಂದಿದ್ದವು ಎಂದು ತಿಳಿಸಿದೆ.

ಪ್ರಯಾಣಿಕನನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com