ಮಹಿಳಾ ಸಿಬ್ಬಂದಿಗೆ ಕಿರುಕುಳ: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಬಂಧಿಸುವಂತೆ ವಿಎಚ್‌ಪಿ ಮಹಿಳಾ ಘಟಕ ಆಗ್ರಹ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪ ಹೊತ್ತಿರುವ ಮನ್ಸೂರ್ ಅಲಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮಹಿಳಾ ಘಟಕದ ದುರ್ಗಾ ವಾಹಿನಿ ಮಂಗಳವಾರ ಒತ್ತಾಯಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪ ಹೊತ್ತಿರುವ ಮನ್ಸೂರ್ ಅಲಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮಹಿಳಾ ಘಟಕದ ದುರ್ಗಾ ವಾಹಿನಿ ಮಂಗಳವಾರ ಒತ್ತಾಯಿಸಿದೆ.

ಅಧಿಕಾರಿಯನ್ನು ಹುದ್ದೆಯಿಂದ ಅಮಾನತುಗೊಳಿಸುವಂತೆ ದುರ್ಗಾ ವಾಹಿನಿಯ ಜಿಲ್ಲಾ ಸಂಚಾಲಕಿ ಶ್ವೇತಾ ಅದ್ಯಪಾಡಿ ಪ್ರಕಟಣೆಯಲ್ಲಿ ಕೋರಿದ್ದಾರೆ. ತಪ್ಪಿತಸ್ಥರ ವಿರುದ್ಧ ತುರ್ತು ಕ್ರಮ ಕೈಗೊಳ್ಳದಿದ್ದಲ್ಲಿ ಮುಡಾ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ನಗರ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ಮಹಿಳೆ, ಅಧಿಕಾರಿಯಿಂದ ತನಗೆ ನೀಡಿದ ಲೈಂಗಿಕ, ಮಾನಸಿಕ ಮತ್ತು ದೈಹಿಕ ಕಿರುಕುಳವಾಗಿದೆ ಎಂದು ಹೇಳಿರುವುದಾಗಿ ಅದ್ಯಪಾಡಿ ಹೇಳಿದ್ದಾರೆ.

ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಕೂಡ ಅಧಿಕಾರಿಗಳು ಕೂಡಲೇ ಆಯುಕ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮುಡಾ ಕಚೇರಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾನುವಾರ ಐಪಿಸಿ ಸೆಕ್ಷನ್ 354 ಮತ್ತು 354 ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಆರೋಪಿ ಮನ್ಸೂರ್ ಅಲಿ ಸೋಮವಾರ ಉರ್ವಾ ಪೊಲೀಸ್ ಠಾಣೆಗೆ ಭೇಟಿ ನೀಡಿ ತನಿಖಾಧಿಕಾರಿಗೆ ಹೇಳಿಕೆ ನೀಡಿದ್ದು, ಮುಡಾದ ಸಾಮಾನ್ಯ ಸಭೆಯ ವಿವರವಾದ ವರದಿಯನ್ನು ಸಲ್ಲಿಸುವಂತೆ ಮಹಿಳೆಯನ್ನು ಕೇಳಿದ್ದರಿಂದ ವೈಯಕ್ತಿಕ ದ್ವೇಷದಿಂದ ಮಹಿಳೆ ದೂರು ದಾಖಲಿಸಿದ್ದಾರೆ. ಅವರು ಈ ಹಿಂದೆ ಸಾಕಷ್ಟು ವಿವರಗಳಿಲ್ಲದೆಯೇ ವರದಿ ಸಲ್ಲಿಸಿದ್ದರು ಎಂದು ಆರೋಪಿಸಿದ್ದಾರೆ. 

ತನ್ನ ಕೆಲಸವನ್ನು ಸುಧಾರಿಸಿಕೊಳ್ಳುವಂತೆ. ಅದು ವಿಫಲವಾದರೆ ಆಕೆಯನ್ನು ಕೆಲಸದಿಂದ ತೆಗೆದುಹಾಕಲಾಗುವುದು ಎಂದು ಆಕೆಗೆ ತಿಳಿಸಲಾಯಿತು ಎಂದು ಅಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com