ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ 201 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 201 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ಇಂದು ಒಬ್ಬರು ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಕೋವಿಡ್ ನಿಂದ 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,315 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.74ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು 121 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು 10, ತುಮಕೂರು 14, ಧಾರವಾಡ 3 ಪ್ರಕರಣ ಸೇರಿದಂತೆ ಒಟ್ಟು 201 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Advertisement