ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ, ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಮಿತಿ ರಚನೆ ಬಗ್ಗೆ ಘೋಷಣೆ ಮಾಡಿದ್ದಾರೆ. 

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಲಾಗುತ್ತಿದೆ. ಈ ಸಮತಿಯ ರಾಜ್ಯಾಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಐದು ಮಂದಿ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲೂ ಸಮಿತಿ ರಚಿಸಲಾಗುವುದು. ರಾಜ್ಯ ಮಟ್ಟದ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಲಾಗುವುದು. ಉಳಿದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವ ಧನ ನೀಡಲಾಗುವುದು. ಇದಕ್ಕೆ ವಾರ್ಷಿಕ 16 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಸಮಿತಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ 31 ಸದಸ್ಯರಿರುತ್ತಾರೆ. ಅವರು ಯೋಜನೆಯ ಅನುಷ್ಠಾನದ ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಪ್ರತಿ ಸಮಿತಿಯಲ್ಲಿ  ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ 21 ಸದಸ್ಯರು ಇರಲಿದ್ದು, ಅಧ್ಯಕ್ಷರು 50 ಸಾವಿರ ಗೌರವಧನ ಪಡೆಯಲಿದ್ದಾರೆ ಎಂದರು.

ಇನ್ನು ಕ್ಷೇತ್ರ ಮಟ್ಟದ ಸಮಿತಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ 11 ಮಂದಿ ಸದಸ್ಯರಿರುತ್ತಾರೆ.

"ಕ್ಷೇತ್ರ ಮಟ್ಟದ ಅಧ್ಯಕ್ಷರಿಗೆ 20 ಸಾವಿರ ಅಥವಾ 25 ಸಾವಿರ ಗೌರವಧನ ನೀಡಬೇಕು ಎಂದುಕೊಂಡಿದ್ದೇವೆ. ಸದಸ್ಯರಿಗೆ ಭತ್ಯೆ ಮಾತ್ರ ಸಿಗುತ್ತದೆ. ನಾವು ಒಂದು ವಾರದೊಳಗೆ ಈ ಸಮಿತಿಗಳನ್ನು ರಚಿಸಲಿದ್ದೇವೆ" ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಸೇವೆ ಒದಗಿಸುವ ಶಕ್ತಿ ಯೋಜನೆ, ಮನೆಯ ಒಡತಿಗೆ 2000 ರೂ.ಗಳನ್ನು ನೀಡುವ ಗೃಹ ಲಕ್ಷ್ಮೀ ಯೋಜನೆ, 'ಗೃಹಜ್ಯೋತಿ' ಉಚಿತ ವಿದ್ಯುತ್ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com