ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಇಂದು 240 ಮಂದಿಗೆ ಕೊರೋನಾ ಪಾಸಿಟಿವ್, ಒಂದು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು 240 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 993ಕ್ಕೆ ಏರಿಕೆಯಾಗಿದೆ.
Published on

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು 240 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 993ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 240 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ಇಂದು ಒಬ್ಬರು ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಕೋವಿಡ್ ನಿಂದ 220 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,015 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.42ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು 124 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು 19, ತುಮಕೂರು 21, ಶಿವಮೊಗ್ಗ 11 ಪ್ರಕರಣ ಸೇರಿದಂತೆ ಒಟ್ಟು 240 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

X

Advertisement

X
Kannada Prabha
www.kannadaprabha.com