ಬೆಂಗಳೂರು: ರಾಜ್ಯದಾದ್ಯಂತ ಬಹುತೇಕ ನಗರಗಳು ಮೇಯರ್‌ಗಳು ಮತ್ತು ಉಪಮೇಯರ್‌ಗಳನ್ನು ಹೊಂದಿವೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಸದ್ಯಕ್ಕೆ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿಲ್ಲ.
ಆಡಳಿತಾರೂಢ ಕಾಂಗ್ರೆಸ್ ತನ್ನ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಜನವರಿಗಿಂತ ಮೊದಲು ನಡೆಸಲಾಗುವುದು ಎಂದು ಹೇಳಿತ್ತು. ಆದರೆ ಈಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಕಾರಣ ಅದು ಅಸಾಧ್ಯವಾಗಿದೆ. ಈ ವರ್ಷವೂ ಕೂಡ ಚುನಾವಣೆ ನಡೆಯಲು ಸಾಧ್ಯವಿಲ್ಲ ಎಂದು ಪಕ್ಷದ ಮಾಜಿ ಕಾರ್ಪೊರೇಟರ್‌ಗಳು ಹೇಳಿದ್ದಾರೆ, ಆದರೆ ಚುನಾವಣೆ ನಡೆಸುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.
ಕಳೆದ ಬಿಬಿಎಂಪಿ ಕೌನ್ಸಿಲ್‌ನ ಅವಧಿ ಸೆಪ್ಟೆಂಬರ್ 10, 2020 ರಂದು ಕೊನೆಗೊಂಡಿದ್ದು, ಅಂದಿನಿಂದ ನಗರದಲ್ಲಿ ಯಾವುದೇ ಕಾರ್ಪೊರೇಟರ್‌ಗಳಿಲ್ಲ. ಶಾಸಕರು ಮತ್ತು ಸಂಸದರು ನಾಗರಿಕರ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ. 2024 ರಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ.
ಈ ಹಿಂದೆ ಚುನಾವಣೆ ನಡೆಸದ ಬಿಜೆಪಿಯನ್ನು ಕಾಂಗ್ರೆಸ್ ಟೀಕಿಸುತ್ತಿತ್ತು, ಆದರೆ ಈಗ ಆ ಕೆಲಸ ವ್ಯತಿರಿಕ್ತವಾಗಿ ಬದಲಾಗಿದೆ. ರಾಜಕೀಯ ಪಕ್ಷಗಳು ಚುನಾವಣೆ ನಡೆಸಲು ಒಲವು ತೋರುತ್ತಿಲ್ಲ. ಬಹುತೇಕ ಕಡೆ ವಾರ್ಡ್ ಸಮಿತಿಗಳು ಕೆಲಸ ಮಾಡುತ್ತಿಲ್ಲ. ಕೋವಿಡ್ ನಂತರ, ನಾಗರಿಕರು ಕಳಪೆ ನಾಗರಿಕ ಸೌಲಭ್ಯಗಳಿಗೆ ಹೊಂದಿಕೊಂಡು ಬದುಕುತ್ತಿದ್ದಾರೆ, ಬಿಬಿಎಂಪಿ ಅಧಿಕಾರಿಗಳೊಂದಿಗೆ ತಮ್ಮ ಸಮಸ್ಯೆ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ.
ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇವೆ. ಆದರೆ ಯಾವುದೇ ಬದಲಾವಣೆಯಾಗಲಿಲ್ಲ. ಈಗ ಸಂಸತ್ ಚುನಾವಣೆಯತ್ತ ಗಮನ ಹರಿಸಲಾಗಿದೆ. ಶೀಘ್ರದಲ್ಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಹೀಗಾಗಿ ಬಿಬಿಎಂಪಿ ಚುನಾವಣೆ ನಡೆಯುವುದಿಲ್ಲ ಎಂದು ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಒಬ್ಬರು ತಿಳಿಸಿದ್ದಾರೆ.
ವಾರ್ಡ್‌ಗಳ ವಿಂಗಡಣೆ ಸೆಪ್ಟೆಂಬರ್ 2023 ರಲ್ಲಿ ಪೂರ್ಣಗೊಂಡಿತು. ಆದರೆ ಮೀಸಲಾತಿ ಪಟ್ಟಿಯನ್ನು ಇನ್ನೂ ಸಿದ್ಧಪಡಿಸಲಾಗಿಲ್ಲ. ಸರ್ಕಾರವು ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿರುವುದರಿಂದ ಮೀಸಲಾತಿ ಬಗ್ಗೆ ಏನನ್ನೂ ಬಹಿರಂಗಪಡಿಸಲಾಗುವುದಿಲ್ಲ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಜಿಲ್ಲಾ, ಪಟ್ಟಣ ಪಂಚಾಯತ್ ಮತ್ತು ಕಾರ್ಪೊರೇಷನ್ ಚುನಾವಣೆಗಳನ್ನು ನಡೆಸಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಯುಡಿಡಿ ಮತ್ತು ರಾಜಕೀಯ ಪಕ್ಷಗಳೊಂದಿಗೆ ಡಿಸೆಂಬರ್‌ನಲ್ಲಿ ಸಭೆ ನಡೆಸಲಾಯಿತು, ಆದರೆ ನಂತರ ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.
Advertisement