'ಟೋಲ್‌'ನಿಂದ ಎಸ್ಕೇಪ್ ಆಗಲು ಚಾನ್ಸೇ ಇಲ್ಲ: ಶೀಘ್ರವೇ ಜಾರಿಯಾಗಲಿದೆ GPS ಆಧಾರಿತ ಶುಲ್ಕ ಕಡಿತ ವ್ಯವಸ್ಥೆ!

ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಹೆದ್ದಾರಿಗಳಲ್ಲಿ GPS ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲು ಅಧ್ಯಯನಕ್ಕೆ ಮುಂದಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಹೆದ್ದಾರಿಗಳಲ್ಲಿ GPS ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲು ಅಧ್ಯಯನಕ್ಕೆ ಮುಂದಾಗಿದೆ.

ಈ ವ್ಯವಸ್ಥೆಯಲ್ಲಿ, ವಾಹನ ಚಾಲಕರು ಪಾವತಿ ಮಾಡಲು ಟೋಲ್ ಪ್ಲಾಜಾಗಳಲ್ಲಿ ಕಾಯಬೇಕಾಗಿಲ್ಲ, ಅವರು ಬಳಸುವ ಹೆದ್ದಾರಿಯ ಸಂಪೂರ್ಣ ವಿಸ್ತರಣೆಗೆ ಅವರು ಪಾವತಿಸಬೇಕಾಗಿಲ್ಲ. ಜಿಪಿಎಸ್ ತಂತ್ರಜ್ಞಾನ ಬಳಸಿ ಕ್ರಮಿಸುವ ದೂರಕ್ಕೆ ಮಾತ್ರ ಟೋಲ್ ಶುಲ್ಕ ನಿಗದಿಪಡಿಸಲಾಗುವುದು.

ಈ ವ್ಯವಸ್ಥೆಯನ್ನು ಕಾರ್ಯಗತಗೊಳಿಸಲು, ನಾವು ಟ್ರಾಫಿಕ್, ಆದಾಯ, ವಾಹನ-ಬಳಕೆದಾರರ ನಡವಳಿಕೆ ಇತ್ಯಾದಿಗಳ ಬಗ್ಗೆ ಡೇಟಾ ಸಂಗ್ರಹಿಸುತ್ತಿದ್ದೇವೆ ಎಂದು ಎನ್‌ಎಚ್‌ಎಐ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಯೋ ಫೆನ್ಸಿಂಗ್ ಮೂಲಕ ವಾಹನ ಚಾಲಕರು ಪ್ರಯಾಣಿಸುವ ದೂರವನ್ನು ಲೆಕ್ಕಾಚಾರ ಮಾಡಲು ತಜ್ಞರು ಸಾಫ್ಟ್‌ವೇರ್ ಪ್ರೋಗ್ರಾಂ ಅಭಿವೃದ್ಧಿಪಡಿಸುತ್ತಿದ್ದಾರೆ. ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. 

ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಅಳವಡಿಸಲು ನಾವು ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿ ಸೇರಿದಂತೆ ಭಾರತದಾದ್ಯಂತ ಐದು ಹೆದ್ದಾರಿಗಳನ್ನು ಆಯ್ಕೆ ಮಾಡಿದ್ದೇವೆ ಎಂದು ವಿವರಿಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಆಯ್ಕೆ ಮಾಡುವ ಐದು ಹೆದ್ದಾರಿಗಳಲ್ಲಿ ಪೈಕಿ ಒಂದರಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುವುದು. ಪ್ರಾಯೋಗಿಕ ಯೋಜನೆಯ ಫಲಿತಾಂಶದ ಆಧಾರದ ಮೇಲೆ, ಇದನ್ನು ಇತರ ನಾಲ್ಕು ಹೆದ್ದಾರಿಗಳಿಗೆ ವಿಸ್ತರಿಸಲಾಗುವುದು ಎಂದು ಅಧಿಕಾರಿ ಹೇಳಿದರು. ಈ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಶೀಘ್ರದಲ್ಲೇ ಟೋಲ್ ಪ್ಲಾಜಾ ಆಧಾರಿತ ವ್ಯವಸ್ಥೆಯನ್ನು ಬದಲಾಯಿಸಲಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com