ಮಧುಗಿರಿ ಸರ್ಕಾರಿ ಹಾಸ್ಟೆಲ್‌ ನಲ್ಲಿದ್ದ ಅಪ್ರಾಪ್ತ ಬಾಲಕಿಗೆ ಹೆರಿಗೆ; ಪೋಕ್ಸೋ ಪ್ರಕರಣ ದಾಖಲು

ತುಮಕೂರು ಜಿಲ್ಲೆಯ ಮಧುಗಿರಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ ಹಾಸ್ಟೆಲ್‌ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣದ ಸಂಬಂಧ ಪೊಲೀಸರು ಗುರುವಾರ ಪೋಕ್ಸೋ ಕಾಯ್ದೆ ಅಡಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ತುಮಕೂರು ಜಿಲ್ಲೆಯ ಮಧುಗಿರಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ ಹಾಸ್ಟೆಲ್‌ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣದ ಸಂಬಂಧ ಪೊಲೀಸರು ಗುರುವಾರ ಪೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಿಸಿದ್ದಾರೆ.

ತುಮಕೂರು ಜಿಲ್ಲೆಯ ವಸತಿ ಶಾಲೆಯಲ್ಲಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ 14 ವರ್ಷದ ಬಾಲಕಿ ಹೊಟ್ಟೆ ನೋವು ಎಂದು ಊರಿಗೆ ಮರಳಿದ್ದಳು. ನೋವು ಹೆಚ್ಚಾಗಿದ್ದರಿಂದ ಪೋಷಕರು ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.

ಹೊಟ್ಟೆನೋವು ಎಂದ ಕಾರಣ ಬಾಲಕಿಯ ಸ್ಕ್ಯಾನಿಂಗ್‌ ಹಾಗೂ ಇತರ ವೈದ್ಯಕೀಯ ಪರೀಕ್ಷೆ ಮಾಡಿದಾಗ ಏಳು ತಿಂಗಳು ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ವೈದ್ಯರು ಮಂಗಳವಾರ ಶಸ್ತ್ರಚಿಕಿತ್ಸೆಯ ಮೂಲಕ ಮಗುವನ್ನು ಹೊರತೆಗೆದಿದ್ದರು. ಈ ಬಗ್ಗೆ ವೈದ್ಯರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಾಲಕಿಯ ತೂಕ ಕಡಿಮೆ ಆಗಿದೆ. ಆದರೆ ಬಾಲಕಿ ಮತ್ತು ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ಸಂರಕ್ಷಣಾ ಕಾಯ್ದೆ(ಪೋಕ್ಸೋ)ಯ ಇತರ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬಾಲಕಿಗೆ ಮಕ್ಕಳ ಕಲ್ಯಾಣ ಸಮಿತಿಯಿಂದ ಕೌನ್ಸೆಲಿಂಗ್ ಮಾಡಲಾಗಿದೆ. ಕೌನ್ಸೆಲಿಂಗ್ ಸಮಯದಲ್ಲಿ, ಬಾಲಕಿ ತನ್ನ ಶಾಲೆಯ ಅಪ್ರಾಪ್ತ ಹುಡುಗನಿಂದ ಗರ್ಭಿಣಿಯಾಗಿರುವುದಾಗಿ ಹೇಳಿದ್ದಾರೆ. ಆದರೆ ವಿಚಾರಣೆಯ ಸಮಯದಲ್ಲಿ, ಹುಡುಗ ಅದನ್ನು ನಿರಾಕರಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಆದರೆ ಘಟನೆಗೆ ಸಂಬಂಧಿಸಿದಂತೆ ಇನ್ನೂ ಯಾರನ್ನೂ ಬಂಧಿಸಿಲ್ಲ. ಬಾಲಕಿ ಮತ್ತು ಆಕೆಯ ಪೋಷಕರು ಸಹ ಬಾಯಿ ಬಿಡುತ್ತಿಲ್ಲ. ಅವರಿಗೆ ಕೌನ್ಸೆಲಿಂಗ್ ಮಾಡಲಾಗುತ್ತಿದೆ. ಹುಡುಗಿ ತನ್ನ ಹೇಳಿಕೆಗೆ ಬದ್ಧವಾಗಿಲ್ಲ. ಶಾಲೆಯ ಮತ್ತೊಬ್ಬ ಹುಡುಗನ ಹೆಸರು ಸಹ ಹೇಳುತ್ತಿದ್ದಾಳೆ. ನಾವು ಅವರೆಲ್ಲರನ್ನೂ ಪ್ರಶ್ನಿಸುತ್ತಿದ್ದೇವೆ, ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com