ಮಧುಗಿರಿಯಲ್ಲೊಂದು ಆಘಾತಕಾರಿ ಘಟನೆ: ಹಾಸ್ಟೆಲ್‌ ನಲ್ಲಿದ್ದ ಅಪ್ರಾಪ್ತ ಬಾಲಕಿಗೆ ಹೆರಿಗೆ; ವಾರ್ಡನ್‌ ಅಮಾನತು

ಮಧುಗಿರಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ ಹಾಸ್ಟೆಲ್‌ ನಲ್ಲಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣದ ಸಂಬಂಧ ವಸತಿ ನಿಲಯದ ಮಹಿಳಾ ವಾರ್ಡನ್‌ನನ್ನು ಬುಧವಾರ ಅಮಾನತುಗೊಳಿಸಲಾಗಿದೆ.
ಅಮಾನತು
ಅಮಾನತು

ತುಮಕೂರು: ಮಧುಗಿರಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ ಹಾಸ್ಟೆಲ್‌ ನಲ್ಲಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣದ ಸಂಬಂಧ ವಸತಿ ನಿಲಯದ ಮಹಿಳಾ ವಾರ್ಡನ್‌ನನ್ನು ಬುಧವಾರ ಅಮಾನತುಗೊಳಿಸಲಾಗಿದೆ.

ಹಾಸ್ಟೆಲ್ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದರೂ ಅದನ್ನು ಗಮನಿಸದೆ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ವಾರ್ಡನ್  ನಿವೇದಿತಾ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ವಸತಿ ಶಾಲೆಯಲ್ಲಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಲಕಿ ಹೊಟ್ಟೆ ನೋವು ಎಂದು ಊರಿಗೆ ಮರಳಿದ್ದಳು. ನೋವು ಹೆಚ್ಚಾಗಿದ್ದರಿಂದ ಪೋಷಕರು ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.

ಹೊಟ್ಟೆನೋವು ಎಂದ ಕಾರಣ ಬಾಲಕಿಯ ಸ್ಕ್ಯಾನಿಂಗ್‌ ಹಾಗೂ ಇತರ ವೈದ್ಯಕೀಯ ಪರೀಕ್ಷೆ ಮಾಡಿದಾಗ ಏಳು ತಿಂಗಳು ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ವೈದ್ಯರು ಮಂಗಳವಾರ ಶಸ್ತ್ರಚಿಕಿತ್ಸೆಯ ಮೂಲಕ ಮಗುವನ್ನು ಹೊರತೆಗೆದಿದ್ದರು. ಈ ಬಗ್ಗೆ ವೈದ್ಯರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅಪ್ರಾಪ್ತ ಬಾಲಕ ಸರ್ಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು. ವಾರ್ಡನ್ ಹೇಳಿಕೆ ಪ್ರಕಾರ, ಹುಡುಗಿ ಪಟ್ಟಣದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗುತ್ತಿದ್ದಳು ಮತ್ತು ಅಪ್ರಾಪ್ತ ಹುಡುಗನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ತಿಳಿದು ಬಂದಿದೆ.

ಬಾಲಕಿಯ ಹೇಳಿಕೆ ಆಧರಿಸಿ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಬಾಲಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ಮೂಲದ ಹುಡುಗ ತನ್ನ ಸಂಬಂಧಿಕರ ಮನೆಗೆ ಬಂದು ಸಂಬಂಧ ಬೆಳೆಸುವಂತೆ ಒತ್ತಾಯಿಸುತ್ತಿದ್ದ ಎಂದು ಆಕೆ ಹೇಳಿದ್ದಾಳೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com