ಹಾವೇರಿ ಜಿಲ್ಲೆಯ ಹಾನಗಲ್ ಹೊಟೇಲ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಮೂವರು ಆರೋಪಿಗಳ ಬಂಧನ

ಹಾನಗಲ್‌ನಲ್ಲಿ ನಡೆದಿದ್ದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ನ ಲಾಡ್ಜ್‌ನ ಕೋಣೆಗೆ ಪುರುಷರ ಗುಂಪೊಂದು ನುಗ್ಗಿ, ವಿಭಿನ್ನ ನಂಬಿಕೆಗಳನ್ನು ಅನುಸರಿಸುತ್ತಿದ್ದ ದಂಪತಿಯನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ
ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ

ಹಾವೇರಿ: ಹಾನಗಲ್‌ನಲ್ಲಿ ನಡೆದಿದ್ದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆ. 
ಹಾವೇರಿ ಜಿಲ್ಲೆಯ ಹಾನಗಲ್ ನ ಲಾಡ್ಜ್‌ನ ಕೋಣೆಗೆ ಪುರುಷರ ಗುಂಪೊಂದು ನುಗ್ಗಿ, ವಿಭಿನ್ನ ನಂಬಿಕೆಗಳನ್ನು ಅನುಸರಿಸುತ್ತಿದ್ದ ದಂಪತಿಯನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಮಹಿಳೆ ತಾನು ಸಾಮೂಹಿಕ ಅತ್ಯಾಚಾರಕ್ಕೆ ಬಲಿಯಾಗಿದ್ದೇನೆ ಎಂದು ಹೇಳಿಕೊಂಡಿದ್ದರು. 

ಸಂತ್ರಸ್ತೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ನಂತರ ಸಿಆರ್‌ಪಿಸಿಯ 164 ಅಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ.

ಹಾವೇರಿ ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ಏಳು ಜನರ ಮೇಲೆ ಆರೋಪ ಮಾಡಿದ್ದಾಳೆ, ಅವರಲ್ಲಿ ಮೂವರನ್ನು ಈಗಾಗಲೇ ಬಂಧಿಸಲಾಗಿದೆ.

ಮಹಿಳೆ ತನ್ನ ಹೇಳಿಕೆಯಲ್ಲಿ ಏಳು ಜನರನ್ನು ಆರೋಪಿಸಿದ್ದಾಳೆ. ಅವರಲ್ಲಿ ಮೂವರನ್ನು ಈಗಾಗಲೇ ಬಂಧಿಸಲಾಗಿದೆ. ಒಬ್ಬರು ಆಸ್ಪತ್ರೆಯಲ್ಲಿದ್ದಾರೆ. ಇತರ ಮೂವರು ಪರಾರಿಯಾಗಿದ್ದಾರೆ. ಉಳಿದ ಆರೋಪಿಗಳನ್ನೂ ನಾವು ಬಂಧಿಸುತ್ತೇವೆ ಎಂದು ಎಸ್ಪಿ ಹೇಳಿದರು.

ಈ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಆರೋಪಿಸುತ್ತಿದ್ದಾರೆ. ಘಟನೆಯ ಕುರಿತು ಮಾತನಾಡಿದ ಬೊಮ್ಮಾಯಿ, ಈ ವಿಷಯದ ಬಗ್ಗೆ ಮುಖ್ಯಮಂತ್ರಿಗಳ ಮೌನವನ್ನು ಪ್ರಶ್ನಿಸಿ ತಕ್ಷಣ ಕ್ರಮಕ್ಕೆ ಒತ್ತಾಯಿಸಿದರು.

ಈ ವಿಚಾರದಲ್ಲಿ ಸಿಎಂ ಏಕೆ ಮೌನವಾಗಿದ್ದಾರೆ, ನಾವು ಇದನ್ನು ಗಂಭೀರವಾಗಿ ಪರಿಗಣಿಸಲಿದ್ದೇವೆ. ಪೊಲೀಸರು ಸ್ವತಂತ್ರವಾಗಿ ಮತ್ತು ವಿವೇಚನೆಯಿಂದ ಕಾರ್ಯನಿರ್ವಹಿಸಬೇಕೆಂದು ನಾನು ಬಯಸುತ್ತೇನೆ, ಅವರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com