ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನಿರಾಕರಿಸದಿರಿ: ಸ್ಮಶಾನ, ಚಿತಾಗಾರಗಳಿಗೆ ಸರ್ಕಾರ ಸೂಚನೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ನಡುವಲ್ಲೇ  ಕೊವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಕುರಿತಾಗಿ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು:ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ನಡುವಲ್ಲೇ  ಕೊವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಕುರಿತಾಗಿ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಮತ್ತು ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಲಾಗಿದೆ.

ಇದರಂತೆ ಸ್ಮಶಾನದ ಸಿಬ್ಬಂದಿ ಮೃತದೇಹದ ಅಂತ್ಯಕ್ರಿಯೆ ನಡೆಸಲು ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಂತ್ಯಕ್ರಿಯೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸಬೇಕು.

“ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ನಡೆಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಗಳಲ್ಲಿ ಅಂತ್ಯಕ್ರಿಯೆಗೆ ತರುವ ಮೃತದೇಹಗಳನ್ನು ಚಿತಾಗಾರ, ಸ್ಮಶಾನದ ಸಿಬ್ಬಂದಿ ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಎನ್‌-95 ಮಾಸ್ಕ್, ಗ್ಲೌವ್ಸ್‌ ಹಾಗೂ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ವಿಲೇವಾರಿ ಮಾಡಬೇಕು” ಎಂದು ಹೇಳಿದೆ.

ಈ ನಿಟ್ಟಿನಲ್ಲಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಡಳಿತಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com