ವೈಟ್ ರೋಸ್ ಲೇಔಟ್‌ನಲ್ಲಿ ಅಧಿಕೃತ ಕಟ್ಟಡಗಳ ನಿರ್ಮಾಣ: ಪ್ರತಿಭಟನೆ ಬಳಿಕ ಎಚ್ಚೆತ್ತ ಅಧಿಕಾರಿಗಳು, ಬಿಲ್ಡರ್‌ಗಳಿಗೆ ನೋಟಿಸ್ ಜಾರಿ

ನಗರದ ವೈಟ್ ರೋಸ್ ಲೇಔಟ್‌ನಲ್ಲಿ ನಾಯಿಕೊಡೆಗಳಂತೆ ತಲೆಎತ್ತುತ್ತಿರುವ ಅನಧಿಕೃತ ಕಟ್ಟಡಗಳು ಹಾಗೂ ಪೇಯಿಂಗ್ ಗೆಸ್ಟ್ ವಸತಿ ಗೃಹಗಳ ವಿರುದ್ಧ ವೈಟ್‌ಫೀಲ್ಡ್ ನಿವಾಸಿಗಳು ಪ್ರತಿಭಟನೆ ನಡೆಸಿದ ಬಳಿಕ ಬಿಡಿಎ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಬಿಲ್ಡರ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ವೈಟ್ ರೋಸ್ ಲೇಔಟ್‌ನಲ್ಲಿ ನಾಯಿಕೊಡೆಗಳಂತೆ ತಲೆಎತ್ತುತ್ತಿರುವ ಅನಧಿಕೃತ ಕಟ್ಟಡಗಳು ಹಾಗೂ ಪೇಯಿಂಗ್ ಗೆಸ್ಟ್ ವಸತಿ ಗೃಹಗಳ ವಿರುದ್ಧ ವೈಟ್‌ಫೀಲ್ಡ್ ನಿವಾಸಿಗಳು ಪ್ರತಿಭಟನೆ ನಡೆಸಿದ ಬಳಿಕ ಬಿಡಿಎ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಬಿಲ್ಡರ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಸ್ಥಳೀಯರ ಪ್ರತಿಭಟನೆ ಬಳಿಕ ಬಿಡಿಎ ಅಧಿಕಾರಿಗಳು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳದಲ್ಲಿ ನಡೆಯುತ್ತಿದ್ದ ನಿರ್ಮಾಣ ಕಾರ್ಯಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಿದರು.

ಬಿಡಿಎ ಪೂರ್ವ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಮೋಹನ್ ಕುಮಾರ್ ನೇತೃತ್ವದ ತಂಡವು ಸಹಾಯಕ ಕಾರ್ಯಪಾಲಕ ಅಭಿಯಂತರರೊಂದಿಗೆ ಸ್ಥಳದಲ್ಲಿ ಪರಿಶೀಲನೆ ನಡೆಸಿತು.

ಪರಿಶೀಲನೆಯ ನಂತರ, ಬಿಲ್ಡರ್‌ಗಳಿಗೆ ನೋಟಿಸ್‌ಗಳನ್ನು ನೀಡಿ, ಕಟ್ಟಡಗಳ ನಿರ್ಮಾಣ ಕಾರ್ಯಗಳನ್ನು ಸ್ಥಗಿತಗೊಳಿಸಿದರು.

ನಮ್ಮ ವೈಟ್‌ಫೀಲ್ಡ್‌ನ ಸಂಚಾಲಕ ಸಂದೀಪ್ ಅನಿರುಧನ್ ಮಾತನಾಡಿ, ಈ ಪ್ರದೇಶದಲ್ಲಿ ಹತ್ತಾರು ಕಟ್ಟಡಗಳು ಅನಧಿಕೃತವಾಗಿ ತಲೆ ಎತ್ತಿವೆ. ಈ ಹಿಂದೆಯೇ ಬಿಬಿಎಂಪಿ ಮತ್ತು ಬಿಡಿಎಗೆ ದೂರು ನೀಡಿದ್ದೆವು. ಅಧಿಕಾರಿಗಳು ಬಂದು ಕಟ್ಟಡಗಳನ್ನು ಗುರುತಿಸಿದ್ದರು. ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಮಾಲೀಕರಿಗೆ ಸೂಚಿಸಿದ್ದರು ಎಂದು ಹೇಳಿದ್ದರು.

ಅಧಿಕಾರಿಗಳ ಸೂಚನೆ ಪ್ರಕಾರ, ಮಾಲೀಕರು ಅಕ್ಟೋಬರ್ 2023 ರಲ್ಲಿ ದಾಖಲನೆಗಳನ್ನು ಸಲ್ಲಿಸಬೇಕಾಗಿತ್ತು, ಆದರೆ, ಈ ಬಗ್ಗೆ ಯಾವುದೇ ಬೆಳವಣಿಗೆಗಳೂ ಬರಲಿಲ್ಲ. ಈ ನಡುವೆ ಹಲವರು ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಇನ್ನೂ ಕೆಲವು ಕಟ್ಟಡಗಳು ನಿರ್ಮಾಣ ಹಂತದಲ್ಲಿದೆ. ಈ ಪ್ರದೇಶದಲ್ಲಿ ಯಾವುದೇ ಸೌಲಭ್ಯಗಳಿಲ್ಲ. ನಗರದ ಕೊಳಗೇರಿ ಪ್ರದೇಶವಾಗಿ ಹೋಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com