ಹಾಸನ: ಬರ್ತ್ ಡೇ ಪಾರ್ಟಿ ಮಾಡಿ ಕಾರಿನಲ್ಲಿ ಜಾಲಿ ರೈಡ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿ, ಮೂವರು ಗಾಯಗಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ನಡೆದಿದೆ.
ಮೃತರನ್ನು ಚನ್ನರಾಯಪಟ್ಟಣದ ರಕ್ಷಿತ್ (22) ಮತ್ತು ಕುಶಾಲ್ (24) ಎಂದು ಗುರುತಿಸಲಾಗಿದೆ. ಕುಶಾಲ್ ಹುಟ್ಟುಹಬ್ಬವನ್ನು ಆಚರಿಸಿದ ಸ್ನೇಹಿತರು ಕಾರಿನಲ್ಲಿ ಜಾಲಿ ರೈಡ್'ಗೆ ತೆರಳಿದ್ದರು. ಈ ವೇಳೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಹಾರಿ ಬಿದ್ದಿದೆ.
ಪರಿಣಾಮ ರಕ್ಷಿತ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಕುಶಾಲ್ ಚಿಕಿತ್ಸೆ ಫಲಕಾರಿಯಾಗದೇ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement