ಬಿಜೆಪಿ ಆಡಳಿತದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯಲಿಲ್ಲವೇ?: ಗೃಹ ಸಚಿವ ಪರಮೇಶ್ವರ

ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಆಡಳಿತಾರೂಢ ಕಾಂಗ್ರೆಸ್ ನಿದ್ದೆಗೆಡುತ್ತಿದೆ ಎಂದು ವಿರೋಧ ಪಕ್ಷ ಆರೋಪ ಬೆನ್ನಲ್ಲೇ ಈ ಹಿಂದಿನ ಬಿಜೆಪಿ ಆಡಳಿತದಲ್ಲಿ ಮಹಿಳೆಯರ ಮೇಲೆ ಯಾವುದೇ ದೌರ್ಜನ್ಯಗಳು ನಡೆದಿಲ್ಲವೇ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಪ್ರಶ್ನಿಸಿದ್ದಾರೆ.
ಗೃಹ ಸಚಿವ ಜಿ ಪರಮೇಶ್ವರ್
ಗೃಹ ಸಚಿವ ಜಿ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಆಡಳಿತಾರೂಢ ಕಾಂಗ್ರೆಸ್ ನಿದ್ದೆಗೆಡುತ್ತಿದೆ ಎಂದು ವಿರೋಧ ಪಕ್ಷ ಆರೋಪ ಬೆನ್ನಲ್ಲೇ ಈ ಹಿಂದಿನ ಬಿಜೆಪಿ ಆಡಳಿತದಲ್ಲಿ ಮಹಿಳೆಯರ ಮೇಲೆ ಯಾವುದೇ ದೌರ್ಜನ್ಯಗಳು ನಡೆದಿಲ್ಲವೇ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಪ್ರಶ್ನಿಸಿದ್ದಾರೆ.

ಇತ್ತೀಚೆಗಷ್ಟೇ ಹಾವೇರಿಯಲ್ಲಿ ಅನ್ಯಧರ್ಮಿಯ ವ್ಯಕ್ತಿಯ ಜೊತೆ ಇದ್ದ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿತ್ತು. ಹಾವೇರಿ ಜಿಲ್ಲೆಯ ಹಂಗಲ್‌ನಲ್ಲಿ ಏಳು ಜನರು ಹೋಟೆಲ್ ಕೋಣೆಗೆ ನುಗ್ಗಿ ದಂಪತಿಗಳ ಮೇಲೆ ಹಲ್ಲೆ ನಡೆಸಿದ್ದರು. ನಂತರ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. 

26ರ ಹರೆಯದ ಸಂತ್ರಸ್ತೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ದೂರಿದ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಸರ್ಕಾರವು ಆರೋಪಿಗಳ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ ರಾಜ್ಯ ಸರ್ಕಾರವು ಮಹಿಳೆಯ ಮೇಲಿನ ದೌರ್ಜನ್ಯ ತಡೆಗೆ ಹಲವು ಉಪಕ್ರಮಗಳನ್ನು ಕೈಗೊಂಡಿದೆ ಎಂದರು.

ಇನ್ನು ವಿರೋಧ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಪರಮೇಶ್ವರ್ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ನಡೆಯಲಿಲ್ಲವೇ? ಅದಕ್ಕೆ ನಾವು ಏನು ಹೇಳಬೇಕು? ಅದು ಸುರಕ್ಷಿತವಾಗಿದೆ ಎಂದು ನಾವು ಹೇಳಬೇಕೇ?" ಪರಮೇಶ್ವರ ಪ್ರಶ್ನಿಸಿದರು.

ಮಹಿಳೆಯರ ಸುರಕ್ಷತೆಗಾಗಿ ನಾವು ಅನೇಕ ಉಪಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಇಂತಹ ಘಟನೆಗಳು ನಡೆದಾಗ ನಾವು ಕ್ರಮ ಕೈಗೊಳ್ಳುತ್ತೇವೆ ಮತ್ತು ಜನರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದು ಪರಮೇಶ್ವರ ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com