ಬಳ್ಳಾರಿಯಲ್ಲಿ ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ: ಓರ್ವ ಕಾರ್ಮಿಕ ಸಾವು, ಐವರಿಗೆ ಗಾಯ

ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದಲ್ಲಿನ ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ
Updated on

ಬಳ್ಳಾರಿ: ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದಲ್ಲಿನ ಬಿಸ್ಕೆಟ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತನನ್ನು ಸಲೀಂ ಎಂದು ಗುರುತಿಸಲಾಗಿದ್ದು ಸ್ಫೋಟದಲ್ಲಿ ಐವರಿಗೆ ಗಾಯಗಳಾಗಿವೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಅವರನ್ನು ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಭರತ್ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಬಳ್ಳಾರಿ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com