ಸಂಚಾರ ನಿಯಮ ಉಲ್ಲಂಘನೆ ತಡೆಗೆ ಕೃತಕ ಬುದ್ಧಿಮತ್ತೆ ಬಳಕೆ: ಡಿಕೆ.ಶಿವಕುಮಾರ್

ಸಂಚಾರ ಸಮಸ್ಯೆ ಸುಧಾರಿಸಲು ಮತ್ತು ಉಲ್ಲಂಘನೆಗಳನ್ನು ತಡೆಯಲು ಕೃತಕ ಬುದ್ಧಿಮತ್ತೆಯನ್ನು ಅಸ್ತ್ರವಾಗಿ ಬಳಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಹೇಳಿದರು.
ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಟಾಲ್‌ಗಳಿಗೆ ಭೇಟಿ ನೀಡಿದರು.
ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಟಾಲ್‌ಗಳಿಗೆ ಭೇಟಿ ನೀಡಿದರು.

ಬೆಂಗಳೂರು: ಸಂಚಾರ ಸಮಸ್ಯೆ ಸುಧಾರಿಸಲು ಮತ್ತು ಉಲ್ಲಂಘನೆಗಳನ್ನು ತಡೆಯಲು ಕೃತಕ ಬುದ್ಧಿಮತ್ತೆಯನ್ನು ಅಸ್ತ್ರವಾಗಿ ಬಳಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಹೇಳಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಲ್ಲಿ 6,000 ಕ್ಕೂ ಹೆಚ್ಚು ಚಾಲನಾ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ಆದರೆ, ದ್ವಿಚಕ್ರ ವಾಹನಗಳಿಂದಾಗುತ್ತಿರುವ ಅಪಘಾತಗಳ ತಡೆಯುವತ್ತ ಹೆಚ್ಚಿನ ಗಮನಹರಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಮರೆಯದೆ ಹೆಲ್ಮೆಟ್ ಗಳನ್ನು ಧರಿಸಬೇಕು. ಸಾರ್ವಜನಿಕರು ಜೀವಕ್ಕೆ ಹೆಚ್ಚಿನ ಆದ್ಯತೆ ನೀಡಿ, ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ನಗರದ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ಎರಡರಲ್ಲೂ ತ್ವರಿತ ಹೆಚ್ಚಳಗಳು ಕಂಡು ಬರುತ್ತಿದೆ. ಇದರಿಂದ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗುತ್ತಿದೆ. ಇದನ್ನು ತಗ್ಗಿಸಲು, ಇತರ ರಾಷ್ಟ್ರಗಳ ಸಂಚಾರ ನಿರ್ವಹಣಾ ಮಾದರಿಗಳನ್ನು ಪರಿಶೀಲಿಸಿ, ಸಮಗ್ರ ಕಾರ್ಯತಂತ್ರವನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com