ಭಾರತ್ ಜೋಡೋ ನ್ಯಾಯ್ ಯಾತ್ರೆ: ಮಣಿಪುರದಲ್ಲಿ ರಾಹುಲ್ ಜೊತೆ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ವಿಶೇಷ ವಿಮಾನದ ಮೂಲಕ ಮಣಿಪುರಕ್ಕೆ ತೆರಳಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ವಿಶೇಷ ವಿಮಾನದ ಮೂಲಕ ಮಣಿಪುರಕ್ಕೆ ತೆರಳಿದ್ದಾರೆಂದು ತಿಳಿದುಬಂದಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ರಾಜ್ಯದ ಇತರೆ ಕಾಂಗ್ರೆಸ್ ನಾಯಕರು ಭಾನುವಾರ ಮಣಿಪುರಕ್ಕೆ ಭೇಟಿ ನೀಡಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ನಾಯಕರಿದೆ ಆತ್ಮೀಯ ಸ್ವಾಗತ ಕೋರಿದ್ದು ಕಂಡು ಬಂದಿತು.

ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರಿಗೆ ಸಿದ್ದರಾಮಯ್ಯ ಅವರು ಶುಭಾಶಯಗಳನ್ನು ತಿಳಿಸಿ, ರಾಷ್ಟ್ರೀಯ ನಾಯಕರೊಂದಿಗೆ ವೇದಿಕೆ ಹಂಚಿಕೊಂಡರು.

ಇಂಫಾಲ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡರೂ, ಇಬ್ಬರೂ ನಾಯಕರು ಪ್ರತ್ಯೇಕ ವಿಶೇಷ ವಿಮಾನದಲ್ಲಿ ಪ್ರಯಾಣಿಸಿದ್ದರು ಎಂದು ವರದಿಗಳಿಂದ ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ನಾನು ಮತ್ತು ಸಿಎಂ ಇಬ್ಬರೂ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ರಾಹುಲ್ ಗಾಂಧಿಯವರು ದೇಶವನ್ನು ಬಲಿಷ್ಠಗೊಳಿಸಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com