ಬೆಂಗಳೂರು: ಬೆಂಕಿ ತಗುಲಿ 4 ಬೈಕ್ ಗಳು ಸುಟ್ಟು ಕರಕಲು, ಸಿಲಿಂಡರ್ ಸ್ಫೋಟಕ್ಕೆ 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಸಿಲಿಂಡರ್ ಸ್ಫೋಟ ಪ್ರಕರಣ ಮತ್ತೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಯಲಹಂಕದ ಎಲ್​ಬಿಎಸ್​​ ಲೇಔಟ್​ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಸಿಲಿಂಡರ್ ಸ್ಫೋಟ ಮತ್ತು ಮೆಟ್ರೊ ನಿಲ್ದಾಣ ಬಳಿ ಹೊತ್ತಿ ಉರಿದ ಬೈಕ್ ಗಳು
ಸಿಲಿಂಡರ್ ಸ್ಫೋಟ ಮತ್ತು ಮೆಟ್ರೊ ನಿಲ್ದಾಣ ಬಳಿ ಹೊತ್ತಿ ಉರಿದ ಬೈಕ್ ಗಳು

ಬೆಂಗಳೂರು: ಸಿಲಿಂಡರ್ ಸ್ಫೋಟ ಪ್ರಕರಣ ಮತ್ತೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಯಲಹಂಕದ ಎಲ್​ಬಿಎಸ್​​ ಲೇಔಟ್​ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಹಾನಿಯಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ.

ಮೆಟ್ರೊ ನಿಲ್ದಾಣ ಬಳಿ ಅಗ್ನಿ ಅವಘಡ, 4 ಬೈಕ್ ಗಳು ಸುಟ್ಟು ಕರಕಲು: ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ನಿಂತಿದ್ದ 4 ಬೈಕ್​ಗಳಿಗೆ ಬೆಂಕಿ ತಗುಲಿ ಬೈಕ್​ಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ‌ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇಂದು ಬೆಳಗಿನ ಜಾವ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್​ಗಳಿಗೆ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಬೈಕ್​ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com