ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಜಾಮೀನು ಆದೇಶ ರದ್ದುಗೊಳಿಸುವಂತೆ 'ಸುಪ್ರೀಂ' ನೋಟಿಸ್
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಆರೋಪಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಜಾಮೀನು ರದ್ದುಗೊಳಿಸುವಂತೆ ಸೂಚಿಸಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ, ಗೌರಿ ತಂಗಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ, ಆರೋಪಿ ಮೋಹನ್ ನಾಯಕ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್, ಆರೋಪಿಗೆ ಕಳೆದ ಡಿಸೆಂಬರ್ 7ರಂದು ಜಾಮೀನು ನೀಡಿ ಆದೇಶಿಸಿತ್ತು
ಕವಿತಾ ಲಂಕೇಶ್ ಅವರು ಪ್ರಕರಣದ ಆರೋಪಿ ಮೋಹನ್ ನಾಯಕ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಮಾಜಿ ಅರ್ಜಿ ಸಲ್ಲಿಸಿದ್ದರು. ಗೌರಿ ಹತ್ಯೆಯ ಕ್ರಿಮಿನಲ್ ಪಿತೂರಿಯ ಭಾಗವಾಗಿರುವ ಮೋಹನ್ ನಾಯಕ್ ಗೆ ನೀಡಲಾದ ಜಾಮೀನನ್ನು ರದ್ದುಗೊಳಿಸುವಂತೆ ನಿರ್ದೇಶನ ನೀಡುವಂತೆ ಕವಿತಾ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಆರೋಪಿ ಮೋಹನ್ ನಾಯಕ್ ಡಿಸೆಂಬರ್ 7, 2023 ರಂದು ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದ ಮೊದಲ ವ್ಯಕ್ತಿ. 2017 ರ ಸೆಪ್ಟೆಂಬರ್ 05 ರಂದು ಬೆಂಗಳೂರಿನಲ್ಲಿ ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ತನ್ನ ಆದೇಶದಲ್ಲಿ, ವಿಚಾರಣೆಯ ವಿಳಂಬವನ್ನು ಉಲ್ಲೇಖಿಸಿ ನಾಯಕ್‌ಗೆ ಜಾಮೀನು ಮಂಜೂರು ಮಾಡಿತ್ತು. ವಿಶೇಷ ತನಿಖಾ ತಂಡ(ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ. ನಾಯಕ್ ಪ್ರಕರಣದಲ್ಲಿ 11ನೇ ಆರೋಪಿಯಾಗಿದ್ದು, ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ