ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವೀಡಿಯೋ: ವ್ಯಕ್ತಿಯ ವಿರುದ್ಧ ಪ್ರಕರಣ

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವೀಡಿಯೋ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವೀಡಿಯೋ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
 
ಅನಿಲ್ ಕುಮಾರ್ ಪ್ರಕರಣದ ಆರೋಪಿಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದಾನೆ. ಎನ್‌ಎಸ್‌ಯುಐ ನಾಯಕ ಸುಹಾನ್ ಆಳ್ವ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ, 505(ಐ)(ಸಿ) ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯು ಕಳೆದ 12 ವರ್ಷಗಳಿಂದ ಸುರತ್ಕಲ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.

ಆರೋಪಿಯು ತನ್ನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದನಾದರೂ, ಸರ್ವರ್ ಸಮಸ್ಯೆ ಮತ್ತು ಇತರ ಸಮಸ್ಯೆಗಳಿಂದ ಕಳೆದ 3 ತಿಂಗಳಿಂದ ಮಾಡಲು ಸಾಧ್ಯವಾಗಲಿಲ್ಲ. ಇದರಿಂದ ಹತಾಶೆಗೊಂಡ ಅವರು ವಿಡಿಯೋ ಮಾಡಿ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com