ಬೆಂಗಳೂರಿನ ತಮಿಳು ಮತಬ್ಯಾಂಕ್ ಮೇಲೆ ಬಿವೈ ವಿಜಯೇಂದ್ರ ಕಣ್ಣು; ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರಿನಲ್ಲಿರುವ ತಮಿಳು ಕವಿ ತಿರುವಳ್ಳುವರ್ ಪ್ರತಿಮೆಯು ತಮಿಳುನಾಡು ಮತ್ತು ಕರ್ನಾಟಕದ ಜನರ ನಡುವಿನ ಸಹೋದರತ್ವವನ್ನು ಪ್ರತಿನಿಧಿಸುತ್ತದೆ ಎಂದು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿರುವ ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಬೆಂಗಳೂರಿನಲ್ಲಿರುವ ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನಲ್ಲಿರುವ ತಮಿಳು ಕವಿ ತಿರುವಳ್ಳುವರ್ ಪ್ರತಿಮೆಯು ತಮಿಳುನಾಡು ಮತ್ತು ಕರ್ನಾಟಕದ ಜನರ ನಡುವಿನ ಸಹೋದರತ್ವವನ್ನು ಪ್ರತಿನಿಧಿಸುತ್ತದೆ ಎಂದು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿರುವ ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಬೆಂಗಳೂರಿನ ತಿರುವಳ್ಳುವರ್ ಮತ್ತು ಚೆನ್ನೈನಲ್ಲಿರುವ ಕನ್ನಡದ ದಿಗ್ಗಜ ಕವಿ ಸರ್ವಜ್ಞರ ಪ್ರತಿಮೆಗಳು ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಹೋದರತ್ವದ ಸಂಕೇತವಾಗಿವೆ ಎಂದರು.

ಹೋರಾಟದ ನಡುವೆಯೂ ಬೆಂಗಳೂರಿನಲ್ಲಿ ತಿರುವಳ್ಳುವರ್ ಮತ್ತು ತಮಿಳುನಾಡಿನಲ್ಲಿ ಸರ್ವಜ್ಞ ಪ್ರತಿಮೆಗಳನ್ನು ಉದ್ಘಾಟಿಸುವ ಪ್ರಸ್ತಾವನೆಗಳು ದಶಕಗಳಿಂದ ಬಾಕಿ ಉಳಿದಿದ್ದವು. ಆದರೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (ಅವರ ತಂದೆ) ಇದನ್ನು ಸಾಕಾರಗೊಳಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಈ ನಿಟ್ಟಿನಲ್ಲಿ ನಡೆದ ಹೋರಾಟಗಳನ್ನು ಪರಿಗಣಿಸಿ 2009ರಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸೌಹಾರ್ದತೆಯ ಬಾಂಧವ್ಯವನ್ನು ಗಟ್ಟಿಗೊಳಿಸಲು ಇಬ್ಬರು ದಾರ್ಶನಿಕರ ಪ್ರತಿಮೆಗಳನ್ನು ಅನಾವರಣಗೊಳಿಸಿದರು ಎಂದು ಹೇಳಿದರು.

'ಬೆಂಗಳೂರಿನಲ್ಲಿ 18 ವರ್ಷಗಳಿಂದ ತಿರುವಳ್ಳುವರ್ ಪ್ರತಿಮೆಯನ್ನು ಸುತ್ತಿಡಲಾಗಿತ್ತು. ಮಾಜಿ ಸಿಎಂ ಯಡಿಯೂರಪ್ಪನವರ ಪ್ರಯತ್ನದಿಂದ ತಿರುವಳ್ಳುವರ್ ಪ್ರತಿಮೆಯನ್ನು ಇಲ್ಲಿ ಅನಾವರಣಗೊಳಿಸಲಾಯಿತು ಮತ್ತು ಇನ್ನೊಂದೆಡೆ ಚೆನ್ನೈನಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸಹ ಉದ್ಘಾಟಿಸಲಾಯಿತು' ಎಂದರು.

ಬೆಂಗಳೂರು ನಗರದಲ್ಲಿ ತಮಿಳು ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಇಂತಹ ಹೇಳಿಕೆಗಳು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತವೆ. ವಿಜಯೇಂದ್ರ ಅವರ ಈ ಹೇಳಿಕೆಯು ರಾಜ್ಯದಲ್ಲಿ ತಮಿಳು ಮತಬ್ಯಾಂಕ್ ಅನ್ನು ಗುರಿಯಾಗಿಸಿಕೊಳ್ಳುವ ಕ್ರಮವೆಂದು ಪರಿಗಣಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com