2023 ರಲ್ಲಿ ಕೊಡಗಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಶೇ. 38 ರಷ್ಟು ಹೆಚ್ಚಳ

ಕೊಡಗು ಪ್ರವಾಸೋದ್ಯಮ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ 2023ರಲ್ಲಿ ಕೊಡಗಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆಯಲ್ಲಿ ಶೇ.38ರಷ್ಟು ಏರಿಕೆಯಾಗಿದೆ. 2022ರಲ್ಲಿ ಕೊಡಗಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆಗೆ ಹೋಲಿಸಿದರೆ...
ಇರುಪ್ಪು ಜಲಪಾತ
ಇರುಪ್ಪು ಜಲಪಾತ

ಮಡಿಕೇರಿ: ಕೊಡಗು ಪ್ರವಾಸೋದ್ಯಮ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ 2023ರಲ್ಲಿ ಕೊಡಗಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆಯಲ್ಲಿ ಶೇ.38ರಷ್ಟು ಏರಿಕೆಯಾಗಿದೆ. 2022ರಲ್ಲಿ ಕೊಡಗಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆಗೆ ಹೋಲಿಸಿದರೆ ಶೇ 38 ರಷ್ಟು ಹೆಚ್ಚಳವಾಗಿದೆ. 2022 ರಲ್ಲಿ 27,29,711 ಪ್ರವಾಸಿಗರು ಕೊಡಗಿಗೆ ಭೇಟಿ ನೀಡಿದ್ದ, 2023ರಲ್ಲಿ 43,69,507 ಪ್ರವಾಸಿಗರು ಭೇಟಿ ನೀಡಿದ್ದಾರೆ.

ನೈಸರ್ಗಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ಪರಿಸ್ಥಿತಿಯ ನಂತರ, ಪ್ರವಾಸೋದ್ಯಮ ಕ್ಷೇತ್ರ ಕ್ರಮೇಣ ಚೇತರಿಸಿಕೊಳ್ಳುತ್ತಿದೆ.

2018ರ ನಂತರ ಕಳೆದ ವರ್ಷ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ ಮತ್ತು ಡಿಸೆಂಬರ್ 2023 ರಲ್ಲಿ ಒಟ್ಟು 5,82,906 ಪ್ರವಾಸಿಗರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ.

ಜನವರಿ 12 ರವರೆಗಿನ ಹೊಸ ವರ್ಷದ ಅವಧಿಯಲ್ಲಿ 6,20,808 ಪ್ರವಾಸಿಗರು ಕೊಡಗಿಗೆ ಭೇಟಿ ನೀಡಿದ್ದಾರೆ. ಇಲಾಖೆಯ ಸಮೀಕ್ಷೆಯ ಪ್ರಕಾರ, ಆನ್‌ಲೈನ್‌ನಲ್ಲಿ ಹೆಚ್ಚು ಹುಡುಕಲ್ಪಟ್ಟ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೊಡಗು ಮೂರನೇ ಸ್ಥಾನದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com