ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಇಬ್ಬರು ಬಂಧನ!

ಅಯೋಧ್ಯೆಯಲ್ಲಿನ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿತ್ತು. ಆದರೆ ಇದನ್ನು ಕೆಲ ಕಿಡಿಗೇಡಿಗಳು ಬ್ಲೇಡ್ ನಿಂದ ಕುಯ್ದಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. 
ಶ್ರೀರಾಮನ ಫ್ಲೆಕ್ಸ್
ಶ್ರೀರಾಮನ ಫ್ಲೆಕ್ಸ್

ಕೋಲಾರ: ಅಯೋಧ್ಯೆಯಲ್ಲಿನ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿತ್ತು. ಆದರೆ ಇದನ್ನು ಕೆಲ ಕಿಡಿಗೇಡಿಗಳು ಬ್ಲೇಡ್ ನಿಂದ ಕುಯ್ದಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ಶ್ರೀರಾಮನ ಫ್ಲೆಕ್ಸ್ ಹರಿದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಈ ಸಂಬಂಧ ಮುಳಬಾಗಿಲು ಪೊಲೀಸರು ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸದ್ಯ ಪೊಲೀಸರು ಬಂಧಿತ ವ್ಯಕ್ತಿಗಳ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com