ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು ಕರ್ನಾಟಕ ಪ್ರವೇಶಿಸಬಾರದು: ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು ಕರ್ನಾಟಕ ರಾಜ್ಯವನ್ನು ಪ್ರವೇಶಿಸಬಾರದು ಎಂದು ತಿಳಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 

ಬೆಳಗಾವಿ: ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು ಕರ್ನಾಟಕ ರಾಜ್ಯವನ್ನು ಪ್ರವೇಶಿಸಬಾರದು ಎಂದು ತಿಳಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 

ಗಡಿ ಪ್ರದೇಶದ ಮರಾಠಿ ಭಾಷಿಗರ ಸಂಖ್ಯೆ ಹೆಚ್ಚಳವಾಗಿರುವ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಲ್ಲಿನ ಅಧಿಕಾರಿಗಳು ನಿರ್ಧರಿಸಿದ್ದರು ಎಂಬ ವರದಿಗಳು ಪ್ರಕಟವಾಗಿತ್ತು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸೈನಿಕ ಶಾಲೆಯ ಉದ್ಘಾಟನೆಗೆ ತೆರಳುವ ಮುನ್ನ ಮುಖ್ಯಮಂತ್ರಿಗಳು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ನಮ್ಮ ಮುಖ್ಯ ಕಾರ್ಯದರ್ಶಿ, ಮಾಹರಾಷ್ಟ್ರದ ಸರ್ಕಾರಿ ಅಧಿಕಾರಿಗಳು ಕರ್ನಾಟಕಕ್ಕೆ ಪ್ರವೇಶಿಸದಂತೆ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಗಳಿಗೆ ಹೇಳಿರುವುದಾಗಿ ಸಿಎಂ ತಿಳಿಸಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಬೆಳಗಾವಿಯ ಗಡಿ ವಿಷಯ ಕಾಲಕಾಲಕ್ಕೆ ಭುಗಿಲೆದ್ದಿರುವ ನಡುವೆಯೇ ಈ  ಬೆಳವಣಿಗೆ ನಡೆದಿದೆ. ಬೆಳಗಾವಿಯ ಪ್ರದೇಶದಲ್ಲಿ ಸಾಕಷ್ಟು ಮರಾಠಿ ಮಾತನಾಡುವ ಜನಸಂಖ್ಯೆ ಇರುವುದರಿಂದ ಹಿಂದಿನ ಬಾಂಬೆ ಪ್ರೆಸಿಡೆನ್ಸಿಯ ಭಾಗವಾಗಿದ್ದ ಬೆಳಗಾವಿಯ ಮೇಲೆ ಮಹಾರಾಷ್ಟ್ರ ಹಕ್ಕು ಪ್ರತಿಪಾದನೆ ಮಾಡಿದೆ. 

ಇದು ಪ್ರಸ್ತುತ ಕರ್ನಾಟಕದ ಭಾಗವಾಗಿರುವ 800 ಕ್ಕೂ ಹೆಚ್ಚು ಮರಾಠಿ ಮಾತನಾಡುವ ಹಳ್ಳಿಗಳ ಮೇಲೆ ಹಕ್ಕು ಸಾಧಿಸಿದೆ. ರಾಜ್ಯಗಳ ಮರುಸಂಘಟನೆ ಕಾಯಿದೆ ಮತ್ತು 1967 ರ ಮಹಾಜನ್ ಆಯೋಗದ ವರದಿಯ ಪ್ರಕಾರ ಭಾಷಾವಾರು ರೇಖೆಗಳ ಮೇಲೆ ಮಾಡಿದ ಗಡಿರೇಖೆಯು ಅಂತಿಮವಾಗಿದೆ ಎಂದು ಕರ್ನಾಟಕ ಸಮರ್ಥಿಸುತ್ತದೆ.

ಬೆಳಗಾವಿ ರಾಜ್ಯದ ಅವಿಭಾಜ್ಯ ಅಂಗವಾಗಿದೆ ಎಂಬ ಪ್ರತಿಪಾದನೆಯಲ್ಲಿ, ಕರ್ನಾಟಕ ಬೆಂಗಳೂರಿನಲ್ಲಿರುವ ರಾಜ್ಯ ಶಾಸಕಾಂಗ ಮತ್ತು ಸಚಿವಾಲಯದ ಕೇಂದ್ರವಾದ ವಿಧಾನಸೌಧದ ಮಾದರಿಯಲ್ಲಿ 'ಸುವರ್ಣ ವಿಧಾನ ಸೌಧ'ವನ್ನು ನಿರ್ಮಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com