ಬೆಂಗಳೂರು: ಮಹಿಳಾ ಸರ್ಕಾರಿ ಉದ್ಯೋಗಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ವ್ಯಕ್ತಿ ಬಂಧನ

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿಗಳ ಬಗ್ಗೆ ಅನುಮಾನಾಸ್ಪದವಾಗಿ ಮಾಹಿತಿ ಕಲೆಹಾಕಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿಗಳ ಬಗ್ಗೆ ಅನುಮಾನಾಸ್ಪದವಾಗಿ ಮಾಹಿತಿ ಕಲೆಹಾಕಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಮುಖ್ಯಮಂತ್ರಿಗಳ ಕಾರ್ಯದರ್ಶಿಯವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಆರೋಪಿ ವಿಕ್ರಂ ಗೋಪಾಲಸ್ವಾಮಿ ಎಂಬುವರು ವಿಧಾನಸೌಧ ಹಾಗೂ ಇತರೆ ಸರ್ಕಾರಿ ಇಲಾಖೆಗಳಲ್ಲಿ ಮಹಿಳಾ ಅಧಿಕಾರಿಗಳ ಮಾಹಿತಿ ಕಲೆಹಾಕುತ್ತಿದ್ದ ಎಂದು ತಿಳಿದು ಬಂದಿದೆ.

ಮತ್ತೆ ಕೆಲವು ಕಡೆ ಆರೋಪಿಯು ತಾನು ಕಂದಾಯ ಸಚಿವರ ಆಪ್ತ ಸಹಾಯಕ ಎಂದು ಹೇಳಿಕೊಂಡಿದ್ದಾನೆ. ಡಿಜಿಪಿ ಕಚೇರಿಯಿಂದ ಮತ್ತು ಬೆಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಸರ್ಕಾರಿ ಕಚೇರಿಗಳಿಗೆ ಕರೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಗೋಪಾಲಸ್ವಾಮಿ ವಿರುದ್ಧ ಮಹಿಳಾ ಅಧಿಕಾರಿಯೊಬ್ಬರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಪೊಲೀಸರು ಗೋಪಾಲಸ್ವಾಮಿಯನ್ನು ಬಂಧಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿ ನಿವೃತ್ತ ಅಧಿಕಾರಿಯೊಬ್ಬರ ಪುತ್ರ ಎಂಬುದು ಪತ್ತೆಯಾಗಿದೆ. ಆರೋಪಿಯ ಉದ್ದೇಶದ ಬಗ್ಗೆ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com