ಎಸ್‌ಸಿ ಒಳ ಮೀಸಲಾತಿ ಜಾರಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಅಸ್ತು

ಪರಿಶಿಷ್ಟ ಜಾತಿಗೆ(ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗೆ(ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ವಿವಿಧ ಸಮುದಾಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಒಪ್ಪಿಗೆ ಸೂಚಿಸಲಾಗಿದೆ.

ಸಂಪುಟ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರಾದ ಎಚ್​ಕೆ ಪಾಟೀಲ್ ಹಾಗೂ ಎಚ್​ಸಿ ಮಹಾದೇವಪ್ಪ ಅವರು, ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಗ್ಗೆ ವಿವರಿಸಿದರು.

ವರದಿ ಕುರಿತು ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಹೊಸ ಜನಗಣತಿ ಪ್ರಕಾರ ಮೀಸಲಾತಿ ಪರಿಷ್ಕರಿಸಲು ಸಂವಿಧಾನಬದ್ಧವಾಗಿ ರಾಜ್ಯಗಳಿಗೆ ಅಧಿಕಾರ ನೀಡುವಂತೆ ಮತ್ತು ಒಳ ಮೀಸಲಾತಿಗಾಗಿ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದರು.

ಇದರೊಂದಿಗೆ ಒಳ ಮೀಸಲಾತಿ ವಿವಾದ ಈಗ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಈ ಹಿಂದೆ ಬಿಜೆಪಿ ಸರ್ಕಾರ ವರ್ಗೀಕರಣ ಮಾಡಿ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಈ ವಿಚಾರ ಸುಪ್ರೀಂ​ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಸಿದ್ದರಾಮಯ್ಯನವರ ಸರ್ಕಾರ ಕಾನೂನು ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಿ ಕೈತೊಳೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com