ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ಸಂಚಾರ ಮಾರ್ಗ ಬದಲಾವಣೆ, ದೇವನಹಳ್ಳಿಯಲ್ಲಿ ಬೋಯಿಂಗ್‌ನ ಅತಿದೊಡ್ಡ ಸೌಲಭ್ಯ ಉದ್ಘಾಟನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ಜನವರಿ 19ರಂದು ಬೆಂಗಳೂರು ಹೊರವಲಯ ದೇವನಹಳ್ಳಿಗೆ ಭೇಟಿ ನೀಡುತ್ತಿದ್ದು, ಅವರ ಆಗಮನ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ಜನವರಿ 19ರಂದು ಬೆಂಗಳೂರು ಹೊರವಲಯ ದೇವನಹಳ್ಳಿಗೆ ಭೇಟಿ ನೀಡುತ್ತಿದ್ದು, ಅವರ ಆಗಮನ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಪ್ರಧಾನಿ ಮೋದಿ ಅವರು ನಾಳೆ ಮಧ್ಯಾಹ್ನ 2:10 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ತಲುಪಲಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ನಾಳೆ ಹೆಣ್ಣೂರು - - ಬಾಗಲೂರು ರಸ್ತೆ (ಹೊಸ ವಿಮಾನ ನಿಲ್ದಾಣ ರಸ್ತೆ) ಮತ್ತು ಕೆಐಎಗೆ ಹೋಗುವ ಇತರ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಘೋಷಿಸಿದ್ದಾರೆ. 

ರಾಜ್ಯ ಬಿಜೆಪಿಯಿಂದ ಅದ್ದೂರಿ ಸ್ವಾಗತಕ್ಕೆ ಸಜ್ಜು: ಈ ವೇಳೆ ಪ್ರಧಾನಿ ಸ್ವಾಗತಕ್ಕೆ ಕಾರ್ಯಕರ್ತರಿಗೆ ಅವಕಾಶ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ದೇಶಿಸಿದ್ದು, ಪ್ರಮುಖರ ಜತೆ ಚರ್ಚೆ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆ ಸಮೀಪ ಇರುವ ಕಾರಣ, ಮೋದಿ ರೋಡ್‌ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿತ್ತು. ಆದರೆ ಸಮಯದ ಅಭಾವದಿಂದ ಕೊನೆ ಕ್ಷಣದಲ್ಲಿ ರದ್ದಾಗಿದೆ. 

ಬಿಜೆಪಿ ಕಾರ್ಯಕಾರಿಣಿ ಮುಂದೂಡಿಕೆ: ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ನಾಳೆ ನಿಗದಿಪಡಿಸಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಯನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದರು.
ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಜತೆ ಸೋಮವಾರ ಸಂಜೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 8 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಗೊಲ್ಲಹಳ್ಳಿ ಗೇಟ್ ನಿಂದ ಹುನಚೂರುವರೆಗೆ, ಏರ್ ಲೈನ್ಸ್ ಡಾಬಾದಿಂದ ಬೂದಿಗೆರೆಯವರೆಗೆ, ಹೆಣ್ಣೂರು-ಬಗಲೂರು ಮುಖ್ಯ ರಸ್ತೆಯಿಂದ ವಿಮಾನ ನಿಲ್ದಾಣ ರಸ್ತೆಯವರೆಗೆ, ಚಿಕ್ಕಜಾಲ ಕೋಟೆ ಮುಖ್ಯ ರಸ್ತೆಯಿಂದ ವಿಮಾನ ನಿಲ್ದಾಣದವರೆಗೆ, ಬಗಲೂರಿನಿಂದ ವಿಮಾನ ನಿಲ್ದಾಣದವರೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ವೈಟ್ ಫೀಲ್ಡ್, ಕೆ.ಆರ್. ಪುರಂನಿಂದ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗೊಲ್ಲಹಳ್ಳಿ ಗೇಟ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

ಗೊಲ್ಲಹಳ್ಳಿ ಗೇಟ್-ಬಲದಿರುವು-ಹೊನ್ನಹಳ್ಳಿ ಗೇಟ್-ಬೆಟ್ಟಕೋಟೆ-ಎಲ್‌ಲೈನ್ ಡಾಬಾ-ಎಡತಿರುವು-ದೇವನಹಳ್ಳಿ ಬಸ್ ನಿಲ್ದಾಣ-ಎಡ ತಿರುವು-ದೇವನಹಳ್ಳಿ ಬೈಪಾಸ್-ಎಡ ತಿರುವು-ಬಿ.ಬಿ ರಸ್ತೆ-ದೇವನಹಳ್ಳಿ ಟೋಲ್-ಎಡ ತಿರುವು-ಕೆಂಪೇಗೌಡ ವಿಮಾನ ನಿಲ್ದಾಣ.

2. ರಾಷ್ಟ್ರೀಯ ಹೆದ್ದಾರಿ-648 ಏರ್‌ಲೈನ್ ಡಾಬಾ ಜಂಕ್ಷನ್ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಕಡೆಗೆ ಕೆ.ಐ.ಎ.ಡಿ.ಬಿ ಇಂಡಸ್ಟ್ರೀಯಲ್ ಏರಿಯಾ ಸಂಚರಿಸುವ ವಾಹನ ಸಂಚರಿಸಬೇಕಾದ ಮಾರ್ಗಗಳು:

ಏರ್‌ಲೈನ್ಸ್ ಡಾಬಾ-ದೇವನಹಳ್ಳಿ ಬಸ್ ನಿಲ್ದಾಣ-ಎಡತಿರುವು-ದೇವನಹಳ್ಳಿ ಬೈಪಾಸ್-ಎಡ ತಿರುವು-ಬಿ.ಬಿ ರಸ್ತೆ- ದೇವನಹಳ್ಳಿ ಟೋಲ್-ಎಡ ತಿರುವು- ಕೆಂಪೇಗೌಡ ವಿಮಾನ ನಿಲ್ದಾಣ.

3. ಹೆಣ್ಣೂರು-ಬಾಗಲೂರು ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನ ಸಂಚರಿಸಬೇಕಾದ ಮಾರ್ಗಗಳು:

ಬಾಗಲೂರು ಗುಂಡಪ್ಪ ಸರ್ಕಲ್-ಎಡ ತಿರುವು-ರೇವಾ ಕಾಲೇಜು ಜಂಕ್ಷನ್-ಬಾಗಲೂರು ಕ್ರಾಸ್-ಬಲ ತಿರುವು- ಚಿಕ್ಕ ಚಾಲ-ಸಾದಹಳ್ಳಿ ಟೋಲ್ -ಏರ್ ಪೋರ್ಟ ಪ್ರೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ.

4. ಚಿಕ್ಕಜಾಲ ಕೋಟೆ ಕ್ರಾಸ್ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಚಿಕ್ಕಚಾಲ-ಸಾದಹಳ್ಳಿ ಟೋಲ್ – ಏರ್ ಪೋರ್ಟ ಪ್ರೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ

5. ಬಾಗಲೂರು ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳನ್ನು ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಬಾಗಲೂರು ಕಾಲೋನಿ ಬಲ ತಿರುವು – ರಜಾಕ್ ಪಾಳ್ಯ – ಎಂ.ವಿ.ಐ.ಟಿ ಕಾಲೇಜು – ಚಿಕ್ಕಚಾಲ ಬಲ ತಿರುವು – ಬಿಬಿ ರಸ್ತೆ – ಸಾದಹಳ್ಳಿ ಟೋಲ್- ಏರ್ ಪೋರ್ಟ ಪ್ರೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ.

ಬೆಂಗಳೂರಿನಲ್ಲಿ ಬೋಯಿಂಗ್‌ನ ಅತಿದೊಡ್ಡ ಸೌಲಭ್ಯ ಉದ್ಘಾಟನೆ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (BIETC) ಕ್ಯಾಂಪಸ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

1,600 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ನಿರ್ಮಿಸಲಾದ 43 ಎಕರೆ ಕ್ಯಾಂಪಸ್ ಅಮೆರಿಕ ಹೊರಗೆ ಬೋಯಿಂಗ್‌ನ ಅತಿದೊಡ್ಡ ಹೂಡಿಕೆಯಾಗಿದೆ.

"ಭಾರತದಲ್ಲಿ ಬೋಯಿಂಗ್‌ನ ಹೊಸ ಕ್ಯಾಂಪಸ್ ಭಾರತ ದೇಶದ ಅದ್ಭುತ ಆರಂಭಿಕ, ಖಾಸಗಿ ಮತ್ತು ಸರ್ಕಾರಿ ಪರಿಸರ ವ್ಯವಸ್ಥೆಯ ಪಾಲುದಾರಿಕೆಗೆ ಮೂಲಾಧಾರವಾಗಲಿದೆ ಮತ್ತು ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಕ್ಕಾಗಿ ಮುಂದಿನ ಪೀಳಿಗೆಯ ಉತ್ಪನ್ನಗಳು ಮತ್ತು ಸೇವೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ" ಎಂದು ಪಿಐಬಿ ಹೇಳಿಕೆ ತಿಳಿಸಿದೆ.

ಪ್ರಧಾನಮಂತ್ರಿಯವರು ಬೋಯಿಂಗ್ ಸುಕನ್ಯಾ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದಾರೆ, ಇದು ದೇಶದ ಬೆಳೆಯುತ್ತಿರುವ ವಾಯುಯಾನ ಕ್ಷೇತ್ರಕ್ಕೆ ಭಾರತದಾದ್ಯಂತ ಹೆಚ್ಚಿನ ಹೆಣ್ಣು ಮಕ್ಕಳ ಪ್ರವೇಶವನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ.
ಈ ಕಾರ್ಯಕ್ರಮವು ಭಾರತದಾದ್ಯಂತ ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕ್ಷೇತ್ರಗಳಲ್ಲಿ ನಿರ್ಣಾಯಕ ಕೌಶಲ್ಯಗಳನ್ನು ಕಲಿಯಲು ಮತ್ತು ವಾಯುಯಾನ ವಲಯದಲ್ಲಿ ಉದ್ಯೋಗಗಳಿಗೆ ತರಬೇತಿ ನೀಡಲು ಅವಕಾಶಗಳನ್ನು ಒದಗಿಸುತ್ತದೆ. ಯುವತಿಯರಿಗಾಗಿ, ಪ್ರೋಗ್ರಾಂ 150 ಯೋಜಿತ ಸ್ಥಳಗಳಲ್ಲಿ STEM ಲ್ಯಾಬ್‌ಗಳನ್ನು ರಚಿಸುತ್ತದೆ, ಇದು STEM ವೃತ್ತಿಜೀವನದಲ್ಲಿ ಆಸಕ್ತಿಯನ್ನು ಹುಟ್ಟುಹಾಕಲು ಸಹಾಯ ಮಾಡುತ್ತದೆ. ಈ ಕಾರ್ಯಕ್ರಮವು ಪೈಲಟ್ ಆಗಲು ತರಬೇತಿ ಪಡೆಯುತ್ತಿರುವ ಮಹಿಳೆಯರಿಗೆ ವಿದ್ಯಾರ್ಥಿವೇತನವನ್ನು ಸಹ ನೀಡುತ್ತದೆ.

ಈ ವರ್ಷದ ಆರಂಭದಲ್ಲಿ, 20 787 ಡ್ರೀಮ್‌ಲೈನರ್‌ಗಳು, 10 777Xs, ಮತ್ತು 190 737 MAX ನ್ಯಾರೋಬಾಡಿ ವಿಮಾನಗಳನ್ನು ಒಳಗೊಂಡಂತೆ 200 ಕ್ಕೂ ಹೆಚ್ಚು ಜೆಟ್‌ಗಳಿಗೆ ಬೋಯಿಂಗ್‌ನಿಂದ ಏರ್ ಇಂಡಿಯಾ ಸಂಸ್ಥೆಯು ಸಹಿ ಹಾಕಿದ ನಂತರ, ಭಾರತದಲ್ಲಿ ಪೈಲಟ್‌ಗಳಿಗೆ ತರಬೇತಿ ನೀಡಲು ಮೂಲಸೌಕರ್ಯ ಮತ್ತು ಕಾರ್ಯಕ್ರಮಗಳಲ್ಲಿ $100 ಮಿಲಿಯನ್ ಹೂಡಿಕೆಯನ್ನು ಬೋಯಿಂಗ್ ಘೋಷಿಸಿತು.

ಬೆಂಗಳೂರು ಉತ್ತರಕ್ಕೆ ವಿಸ್ತರಿಸುವುದರೊಂದಿಗೆ, ದೇವನಹಳ್ಳಿಯು ಏರೋಸ್ಪೇಸ್ ಉದ್ಯಮದ ಕೇಂದ್ರವಾಗಿ ಹೊರಹೊಮ್ಮುತ್ತಿದೆ, ಮುಖ್ಯವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಾಮೀಪ್ಯ ಮತ್ತು ಮುಂಬರುವ ಬ್ಲೂ ಮೆಟ್ರೋ ಮಾರ್ಗದ (ಕೆಆರ್ ಪುರ - ಯಲಹಂಕ - ಕೆಐಎ) ಅನುಕೂಲತೆಯಿಂದಾಗಿ. 2026ರ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಬೋಯಿಂಗ್‌ನ ಭಾರತದ ಕಾರ್ಯಾಚರಣೆಗಳಲ್ಲಿ ಮುಂಬೈ, ಹಿಂದಾನ್, ರಾಜಾಲಿ ಮತ್ತು ನವದೆಹಲಿಯಲ್ಲಿ ಕ್ಷೇತ್ರ ಸೇವಾ ಕಚೇರಿಗಳು ಮತ್ತು ಬೆಂಗಳೂರು ಮತ್ತು ಚೆನ್ನೈನಲ್ಲಿ ವೇಗವಾಗಿ ಬೆಳೆಯುತ್ತಿರುವ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (BIETC) ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com