ತುಮಕೂರು: ಸೈಬರ್ ಸುರಕ್ಷತೆ ಅಭಿಯಾನದಲ್ಲಿ 44 ಸರ್ಕಾರಿ ಶಾಲೆಗಳು ಭಾಗಿ!

ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಕೊರಟಗೆರೆ ತಾಲ್ಲೂಕಿನ 7,500 ಕ್ಕೂ ಹೆಚ್ಚು ಮಕ್ಕಳನ್ನು ಒಳಗೊಂಡಿರುವ 44 ಸರ್ಕಾರಿ ಶಾಲೆಗಳಲ್ಲಿ ಅಭಿಯಾನವನ್ನು ನಡೆಸಲಾಗುತ್ತಿದೆ. ಜನವರಿ 17 ರಂದು ಆರಂಭವಾದ ಅಭಿಯಾನ ಶುಕ್ರವಾರ ಮುಕ್ತಾಯವಾಗಲಿದೆ.
ಸೈಬರ್ ಸುರಕ್ಷತೆ ಅಭಿಯಾನದಲ್ಲಿ ಮಕ್ಕಳು
ಸೈಬರ್ ಸುರಕ್ಷತೆ ಅಭಿಯಾನದಲ್ಲಿ ಮಕ್ಕಳು
Updated on

ಬೆಂಗಳೂರು: ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಕೊರಟಗೆರೆ ತಾಲ್ಲೂಕಿನ 7,500 ಕ್ಕೂ ಹೆಚ್ಚು ಮಕ್ಕಳನ್ನು ಒಳಗೊಂಡಿರುವ 44 ಸರ್ಕಾರಿ ಶಾಲೆಗಳಲ್ಲಿ ಅಭಿಯಾನವನ್ನು ನಡೆಸಲಾಗುತ್ತಿದೆ. ಜನವರಿ 17 ರಂದು ಆರಂಭವಾದ ಅಭಿಯಾನ ಶುಕ್ರವಾರ ಮುಕ್ತಾಯವಾಗಲಿದೆ.

ಬೆಂಗಳೂರು ಮೂಲದ ಇಂಟರ್‌ನ್ಯಾಶನಲ್ ಸ್ಕೂಲ್ ಆಫ್ ಬ್ಯುಸಿನೆಸ್ & ರಿಸರ್ಚ್‌ನ 350 ಕ್ಕೂ ಹೆಚ್ಚು ವಿದ್ಯಾರ್ಥಿ ಸ್ವಯಂಸೇವಕರು LetsTagOn ಫೌಂಡೇಶನ್ ಮತ್ತು ಇಂಡಿಯಾ ಲಿಟರಸಿ ಪ್ರಾಜೆಕ್ಟ್‌ನ ಸಹಯೋಗದೊಂದಿಗೆ ಈ ಅಭಿಯಾನ ಕೈಗೊಂಡಿದ್ದಾರೆ. ಇದಕ್ಕೆ ಜಿಲ್ಲಾ  ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಕೂಡಾ ಬೆಂಬಲ ವ್ಯಕ್ತಪಡಿಸಿದೆ. 

8, 9 ಮತ್ತು 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಚಟುವಟಿಕೆ ಆಧಾರಿತ ಅವಧಿಗಳ ಮೂಲಕ ಶಿಕ್ಷಣ ನೀಡುವ ಗುರಿಯನ್ನು ಅಭಿಯಾನ ಹೊಂದಿದೆ. ಉಪನ್ಯಾಸಗಳು, ವೈಯಕ್ತಿಕ ಸುರಕ್ಷತೆ ಮತ್ತು ಸುರಕ್ಷತಾ ಅಪಾಯಗಳಿಗೆ ಸಂಭವನೀಯ ಬೆದರಿಕೆಗಳ ಮಾಹಿತಿಯನ್ನು ಒಳಗೊಂಡಿರುತ್ತದೆ. ಜೊತೆಗೆ ಅವುಗಳನ್ನು ತಡೆ ಮತ್ತು ಎದುರಿಸುವ ಕ್ರಮಗಳನ್ನು ಒಳಗೊಂಡಿರುತ್ತದೆ.

ಆಯೋಜಕರ ಪ್ರಕಾರ, ಈ ಕಾರ್ಯಕ್ರಮ 30,000 ಕ್ಕೂ ಹೆಚ್ಚು ಜನರ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ. ಏಕೆಂದರೆ ಮಕ್ಕಳು ವಿಶೇಷ ಸೆಷನ್ಸ್ ನಂತರ ತಮ್ಮ ಕುಟುಂಬ ಮತ್ತು ಸ್ನೇಹಿತರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com