ಕೆಎಸ್ ಆರ್ ಟಿಸಿ: ಟಿಕೆಟ್ ರಹಿತ ಪ್ರಯಾಣಿಕರಿಂದ ರೂ. 5.39 ಲಕ್ಷ ದಂಡ ವಸೂಲಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಕರ್ನಾಟಕ ಮತ್ತು ಇತರ ನೆರೆಯ ರಾಜ್ಯಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಪ್ರಯಾಣಿಕರಿಂದ 5.39 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ.
ಕೆಎಸ್ ಆರ್ ಟಿಸಿ ಸಾಂದರ್ಭಿಕ ಚಿತ್ರ
ಕೆಎಸ್ ಆರ್ ಟಿಸಿ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಕರ್ನಾಟಕ ಮತ್ತು ಇತರ ನೆರೆಯ ರಾಜ್ಯಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಪ್ರಯಾಣಿಕರಿಂದ 5.39 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ.

ಡಿಸೆಂಬರ್‌ನಲ್ಲಿ 43,863 ಬಸ್‌ಗಳನ್ನು ತಪಾಸಣೆ ನಡೆಸಿದ ಸಿಬ್ಬಂದಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 3,340 ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ ಎಂದು ಗುರುವಾರ ಕೆಎಸ್ ಆರ್ ಟಿಸಿ ಹೇಳಿಕೆಯಲ್ಲಿ ತಿಳಿಸಿದೆ. 

ಇದನ್ನೂ ಓದಿ: ಕೆಎಸ್ ಆರ್ ಟಿಸಿಯಿಂದ ಮೃತ ಉದ್ಯೋಗಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ವಿತರಣೆ
  
ಟಿಕೆಟ್ ಇಲ್ಲದೆ ಪ್ರಯಾಣದಿಂದ ನಿಗಮಕ್ಕೆ ಒಟ್ಟು ರೂ. 77, 577 ನಷ್ಟವಾಗಿತ್ತು. ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವಾಗ ಮಾನ್ಯವಾದ ಟಿಕೆಟ್‌ಗಳು/ಪಾಸ್‌ಗಳನ್ನು ಪಡೆದುಕೊಳ್ಳುವಂತೆ ಬಸ್ ನಿಗಮವು ಸಾರ್ವಜನಿಕರಲ್ಲಿ ವಿನಂತಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com