
ಬೆಂಗಳೂರು: ಲೋಡ್ ಟೆಸ್ಟಿಂಗ್ ನಂತರ ಡಾ. ಶಿವಕುಮಾರ ಸ್ವಾಮೀಜಿ (ಪೀಣ್ಯ) ಮೇಲ್ಸೇತುವೆ ಮೇಲೆ ಲಘು ಮೋಟಾರ್ ಮತ್ತು ಗೂಡ್ಸ್ ವಾಹನಗಳ ಸಂಚಾರ ಮತ್ತೆ ಪುನಾರಂಭಗೊಂಡಿದೆ.
ಇಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಫ್ಲೈ ಓವರ್ ಮೇಲೆ ವಾಹನಗಳು ಸಂಚರಿಸಲು ಆರಂಭಿಸಿದವು. ಮೇಲ್ಸೇತುವೆ ಮೇಲೆ ಲಘು ಮೋಟಾರ್ ಮತ್ತು ಗೂಡ್ಸ್ ವಾಹನಗಳ ಸಂಚಾರಕ್ಕೂ ಅವಕಾಶ ನೀಡಲಾಗಿದೆ. ಈ ಮೂಲಕ ವಾಹನಗಳ ಚಾಲಕರು ಮತ್ತು ಮಾಲಿಕರು ನಿರಾಳರಾಗಿದ್ದಾರೆ. ಲೋಡ್ ಟೆಸ್ಟಿಂಗ್ನಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿರುವ ಹಿನ್ನೆಲೆಯಲ್ಲಿ ಮುಂದಿನ 20-30 ದಿನಗಳ ಅಂತರದಲ್ಲಿ ಮೇಲ್ಸೇತುವೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವ ನಿರೀಕ್ಷೆಯಿದೆ.
ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಹೈವೇಗೆ ಅಳವಡಿಸಿದ್ದ ವಯಡಕ್ಟ್ ದುರಸ್ಥಿ ಹಿನ್ನೆಲೆ ಲೋಡ್ ಟೆಸ್ಟಿಂಗ್ ನಡೆಸಲಿರುವ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ನಾಗಸಂದ್ರದ ಪಾರ್ಲೆ ಜಿ ಫ್ಯಾಕ್ಟರಿವರೆಗೂ 5 ಕಿಮೀ ಉದ್ದವಿರು ಪೀಣ್ಯ ಮೇಲ್ಸೇತುವೆಯ ವಯಡಕ್ಟ್ನ ಸಮಗ್ರತೆ ಹಾಗೂ ಲೋಡ್ ಟೆಸ್ಟಿಂಗ್ ಪರಿಶೀಲನೆ ಸಂಚಾರಕ್ಕೆ ನಿರ್ಬಂಧ ಹೇರಲು ಮುಖ್ಯ ಕಾರಣವಾಗಿದೆ.2021 ರಿಂದ ಇಲ್ಲಿ ದುರಸ್ತಿ ಕಾರ್ಯ ನಡೆಯುತಿತ್ತು. ಭಾರತೀಯ ವಿಜ್ಞಾನ ಸಂಸ್ಥೆ (ಐಎಎಸ್ಸಿ) ನೀಡಿದ ಸಲಹೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕಾಮಗಾರಿ ನಡೆಸುತ್ತಿತ್ತು. ಸದ್ಯ ಕಾಮಗಾರಿ ಪೂರ್ಣಗೊಂಡಿದೆ.
Advertisement