ಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ, ಇಬ್ಬರು ಸಾವು, 20 ಕಾರ್ಮಿಕರಿಗೆ ಗಂಭೀರ ಗಾಯ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಕಟ್ಟಡದ ಅವಶೇಷಗಳಡಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು, 20 ಜನರಿಗೆ ಗಂಭೀರವಾದ ಗಾಯವಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ
ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ
Updated on

ಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಕಟ್ಟಡದ ಅವಶೇಷಗಳಡಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು, 20 ಜನರಿಗೆ ಗಂಭೀರವಾದ ಗಾಯವಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಕೆಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ ದುರ್ಘಟನೆ ಸಂಭವಿಸಿದೆ.ಕಟ್ಟಡದ ಅವಶೇಷಗಳ ಅಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನೇಸ್ ಶಾಲಾ ಕಟ್ಟಡದ ಎರಡನೇ ಅಂತಸ್ತಿನ ನಿರ್ಮಾಣ ವೇಳೆ ಕಟ್ಟಡ ಕುಸಿದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾರಿಸಿದ್ದು ಕಟ್ಟಡ ತೆರವಿಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಹೆಚ್ಚಿನ ವಿವರ ಲಭ್ಯವಾಗಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com