ಹಾವೇರಿ: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ, 7 ಮಂದಿ ಬಂಧನ

ಹಾನಗಲ್ ನೈತಿಕ ಪೊಲೀಸ್ ಗಿರಿ (Moral Policing) ಹಾಗೂ ಗ್ಯಾಂಗ್ ರೇಪ್ ಪ್ರಕರಣ ಹಸಿರಾಗಿರುವಂತೆಯೇ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಈ ಸಂಬಂಧ 7 ಮಂದಿಯನ್ನು ಬಂಧಿಸಲಾಗಿದೆ.
ಬ್ಯಾಡಗಿ ಪೊಲೀಸ್ ನಿಲ್ದಾಣ
ಬ್ಯಾಡಗಿ ಪೊಲೀಸ್ ನಿಲ್ದಾಣ

ಹಾವೇರಿ: ಹಾನಗಲ್ ನೈತಿಕ ಪೊಲೀಸ್ ಗಿರಿ (Moral Policing) ಹಾಗೂ ಗ್ಯಾಂಗ್ ರೇಪ್ ಪ್ರಕರಣ ಹಸಿರಾಗಿರುವಂತೆಯೇ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಈ ಸಂಬಂಧ 7 ಮಂದಿಯನ್ನು ಬಂಧಿಸಲಾಗಿದೆ.

ಹಿಂದೂ ವ್ಯಕ್ತಿಯೊಬ್ಬನ ಜೊತೆ ಕಾಣಿಸಿಕೊಂಡಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ಯುವತಿಯ (Muslim Women) ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ಮುಸ್ಲಿಂ ಯುವತಿ ಬ್ಯಾಡಗಿ ತಾಲೂಕು ಅಗಸನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದರು. ತಮ್ಮ ಜೊತೆ ಕೆಲಸ ಮಾಡ್ತಿದ್ದ ಜಗದೀಶ್ ಎಂಬ ವ್ಯಕ್ತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಬ್ಯಾಡಗಿ ಪಟ್ಟಣದ ಪುರಸಭೆಯ ಬಳಿಯ ಶಿವನ ದೇವಸ್ಥಾನದ ಬಳಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ. ನೀನು ಯಾಕೆ ಇವನ ಜೊತೆ ಬೈಕ್ ನಲ್ಲಿ ಬಂದೆ? ಎಂದು ಪ್ರಶ್ನಿಸಿದ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ‌. ಯುವತಿಯನ್ನ ಎಳೆದಾಡಿ ಕಪಾಳಕ್ಕೆ ಹೊಡೆದು ಸಾರ್ವಜನಿಕ ಸ್ಥಳದಲ್ಲಿ ಅವಮಾನ ಮಾಡಿದ್ದಾರೆ. ಜೀವ ಬೆದರಿಕೆಯನ್ನೂ ಹಾಕಿದ್ದಾರೆಂದು ಆಕೆ ಪೊಲೀಸ್ ದೂರು ದಾಖಲಿಸಿದ್ದಾರೆ. 

7 ಮಂದಿ ಬಂಧನ
ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ, 7 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ಅಬ್ದುಲ್ ಖಾದರ್ ಮುದಗಲ್, ಮನ್ಸೂರ್ ತಾಂಡೂರು, ಮೆಹಬೂಬಖಾನ್ ಬಡಿಗೇರ, ರೀಯಾಜ್,ಅಲ್ಪಾಜ್ ಬಳಿಗಾರ, ಅಬ್ದುಲ್ ದೇಸೂರ, ಖಾದರ್ ಕಣಕೆ, ಸಲೀಂ ಸಾಬ್ ಖಾಜಿ, ಮಹಬೂಬ್ ಅಲಿ ಹಲಗೇರಿ ಆರೋಪಿಗಳು ಎಂದು ಗುರುತಿಸಲಾಗಿದೆ. ಡಿವೈಎಸ್ಪಿ ಪಾಟೀಲ ನೇತೃತ್ವದಲ್ಲಿ ತನಿಖೆ ನಡೆಸಿದ್ದಾರೆ. ಬಂಧಿತರನ್ನು ಅಬ್ದುಲ್ ಮುದಗಲ್, ಮನ್ಸೂರ್ ತಾಂಡೂರು, ಮೆಹಬೋಬಸಾಬ್ ಬಡಿಗೆರೆ, ರಿಯಾಜ್ ಹಲಗೇರ್, ಅಲ್ಫಾಜ್ ಬಳೆಗಾರ, ಅಬ್ದುಲ್ ದೇಸೂರ್, ಖಾದರ್ ಕಣಕೆ, ಸಲೀಂ ಕಾಜಿ, ಮೆಹಬೋಬಲಿ ಹಲಗೆರೆ. ಐಪಿಸಿ ಸೆಕ್ಷನ್ 143,147,341, 323, 354, 504 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆಯ ತಂದೆಯಿಂದ ಶುಕ್ರವಾರ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸುದ್ದಿ ಹರಡಿದ ನಂತರ ಪರಿಸ್ಥಿತಿ ಸ್ವಲ್ಪ ಉದ್ವಿಗ್ನವಾಗಿದ್ದು, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಂಧಿತರೆಲ್ಲರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com