ರಾಜ್ಯ

ಕಲಬುರಗಿ: ಗಂಡು ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ; ಅಪ್ರಾಪ್ತೆಯ ಸೋದರ ಸಂಬಂಧಿ ಬಂಧನ

ಹಾಸ್ಟೆಲ್ ನಲ್ಲಿ ವಾಸವಿದ್ದೆ ಅಪ್ರಾಪ್ತ ಬಾಲಕಿ ಕಳೆದ ತಿಗಳು ಗಂಡು ಮಗುವಿಗೆ ಜನ್ಮ ನೀಡಿದ್ದಳು, ಆಕೆ ಗರ್ಭ ಧರಿಸಲು ಕಾರಣವಾಗಿದ್ದ ವಿದ್ಯಾರ್ಥಿನಿ ಸೋದರ ಸಂಬಂಧಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ: ಗಂಡು ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ; ಅಪ್ರಾಪ್ತೆಯ ಸೋದರ ಸಂಬಂಧಿ ಬಂಧನ
ಸಾಂದರ್ಭಿಕ ಚಿತ್ರ
Published On :

ಕಲಬುರಗಿ: ಹಾಸ್ಟೆಲ್ ನಲ್ಲಿ ವಾಸವಿದ್ದೆ ಅಪ್ರಾಪ್ತ ಬಾಲಕಿ ಕಳೆದ ತಿಗಳು ಗಂಡು ಮಗುವಿಗೆ ಜನ್ಮ ನೀಡಿದ್ದಳು, ಆಕೆ ಗರ್ಭ ಧರಿಸಲು ಕಾರಣವಾಗಿದ್ದ ವಿದ್ಯಾರ್ಥಿನಿ ಸೋದರ ಸಂಬಂಧಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸ್ಥಳೀಯ ಶಿಕ್ಷಣ ಇಲಾಖೆಯು ಕಲಬುರಗಿ ಜಿಲ್ಲೆಯ ಸರಕಾರಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ವಾರ್ಡನ್ ಅವರನ್ನು ನಿರ್ಲಕ್ಷ್ಯದ ಆರೋಪದಲ್ಲಿ ಅಮಾನತುಗೊಳಿಸಿದೆ. ಪೋಲೀಸರ ಪ್ರಕಾರ, ವಸತಿ ಶಾಲೆಯ ವಿದ್ಯಾರ್ಥಿಯಾಗಿದ್ದ ಸಂತ್ರಸ್ತೆ ಡಿಸೆಂಬರ್ 28, 2023 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಳು.

ಸಂತ್ರಸ್ತೆ ತನ್ನ ನವಜಾತ ಮಗುವಿನೊಂದಿಗೆ ಪ್ರಸ್ತುತ ಕಲಬುರಗಿಯ ಅಮೂಲ್ಯ ಶಿಶು ಗೃಹದಲ್ಲಿ ನೆಲೆಸಿದ್ದಾಳೆ, ಬಾಲಕಿ ಹೊಟ್ಟೆನೋವು ಎಂದು ಶಾಲೆಯ ಅಧಿಕಾರಿಗಳಿಗೆ ದೂರು ನೀಡಿದ ನಂತರ ಆಕೆಯನ್ನು ಪೋಷಕರ ಮನೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೋವು ಹೆಚ್ಚಾದಾಗ ಪೋಷಕರು ಬಾಲಕಿಯನ್ನು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸ್ಕ್ಯಾನ್ ಮಾಡಿದ ನಂತರ ವೈದ್ಯರು ಆಕೆ ಗರ್ಭಿಣಿ ಎಂದು ಪತ್ತೆ ಮಾಡಿದರು.

ಬಳಿಕ ಬಾಲಕಿಯ ಸೋದರ ಸಂಬಂಧಿ ಸಹೋದರ ಆಕೆಯೊಂದಿಗೆ ಶಾರೀರಿಕ ಸಂಬಂಧ ಬೆಳೆಸಿರುವುದು ಬೆಳಕಿಗೆ ಬಂದಿದೆ. ನಿರ್ಲಕ್ಷ್ಯ ತೋರಿದ ಪ್ರಾಂಶುಪಾಲರು ಹಾಗೂ ವಾರ್ಡನ್ ಅವರನ್ನು ಅಮಾನತು ಮಾಡಲಾಗಿದೆ. ಸದ್ಯ ನಿಂಬರಗಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.