ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಭಾನುವಾರ 89 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 497ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 16 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 89 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಕೋವಿಡ್ ನಿಂದ 74 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3,336 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.66ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿತರಲ್ಲಿ 466 ಮಂದಿ ಮನೆ ಆರೈಕೆಗೆ ಒಳಗಾದರೆ, 31 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 2 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Advertisement