ಜ.23ಕ್ಕೆ ಪಿಎಸ್​ಐ ಮರು ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಜನವರಿ 23 ರಂದು 545 ಪಿಎಸ್​ಐ ಮರು ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಜನವರಿ 23 ರಂದು 545 ಪಿಎಸ್​ಐ ಮರು ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಆದೇಶ ಹೊರಡಿಸಿದ್ದಾರೆ.

ಪಿಎಸ್​ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು 117 ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್‌ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

545 ಪಿಎಸ್​ಐ ಮರು ಪರೀಕ್ಷೆಗೆ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ತಯಾರಿಗಳನ್ನು ನಡೆಸುತ್ತಿದ್ದು, ಅಭ್ಯರ್ಥಿಗಳು ಕೂಡ ಪರೀಕ್ಷೆ ಬರೆಯಲು ಸಜ್ಜಾಗಿದ್ದರು. ಈ ನಡುವೆ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿತ್ತು.

ಪ್ರಶ್ನೆ ಪತ್ರಿಕೆ ಲೀಕ್ ಆರೋಪ ಸಂಬಂಧ ಇಂಟೆಲಿಜೆನ್ಸ್ ವಿಭಾಗದ ಸಬ್​ ಇನ್ಸ್​ಪೆಕ್ಟರ್​ ಆಗಿರುವ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಸಂಬಂಧ ಅಭ್ಯರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು, ಇನ್ಸ್​ಪೆಕ್ಟರ್​ ಲಿಂಗಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com