ಶಿವಮೊಗ್ಗ: ಅಯೋಧ್ಯೆ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದ ವೇಳೆ 'ಅಲ್ಲಾಹು ಅಕ್ಬರ್' ಕೂಗಿದ ಮುಸ್ಲಿಂ ಮಹಿಳೆ

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಘಟನೆ ನಡೆಯಿತು.
ಘೋಷಣೆ ಕೂಗಿದ ಮಹಿಳೆ
ಘೋಷಣೆ ಕೂಗಿದ ಮಹಿಳೆ
Updated on

ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಘಟನೆ ನಡೆಯಿತು.

ಇದು ಕೆಲಕಾಲ ಸ್ಥಳದಲ್ಲಿ ಗೊಂದಲ ಸೃಷ್ಟಿಸಿತು. ಘೋಷಣೆ ಕೂಗಿದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ಕೋಟೆ ಪೊಲೀಸ್ ಠಾಣೆಗೆ ಕರೆದೊಯ್ದರು. ಬಿಜೆಪಿ ಸಂಭ್ರಮಾಚರಣೆ ವೇಳೆ ಶಿವಪ್ಪ ನಾಯಕ ವೃತ್ತದ ಮೂಲಕ ಸ್ಕೂಟರ್ ನಲ್ಲಿ ಮಗುವಿನೊಂದಿಗೆ ಹೊರಟಿದ್ದ ಮಹಿಳೆ ಸಂಭ್ರಮಾಚರಣೆ ಕಾರ್ಯಕ್ರಮ ನೋಡುತ್ತಾ ನಿಂತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಸಂಚಾರ ದಟ್ಟಣೆ ತಪ್ಪಿಸಲು ಅವರನ್ನು ಅಲ್ಲಿಂದ ಕಳಿಸಲು ಮುಂದಾದರು. ಆಗ ಮಹಿಳೆ ಪ್ರತಿಭಟಿಸಿದರು.

ಇದೇ ವೇಳೆ ಸಂಭ್ರಮಾಚರಣೆಯಲ್ಲಿ ನಿರತರಾಗಿದ್ದವರು 'ಜೈ ಶ್ರೀರಾಮ್' ಎಂದು ಘೋಷಣೆ ಕೂಗುತ್ತಿದ್ದರು. ಆಗ ಮಹಿಳೆಯೂ 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದರು. ಇದರಿಂದ ಪೊಲೀಸರು ತಬ್ಬಿಬ್ಬಾದರು.

ಪೊಲೀಸರು ಅಲ್ಲಿಂದ ಕಳುಹಿಸಲು ಮುಂದಾದರೂ ಮಹಿಳೆ ಘೋಷಣೆ ಕೂಗುವುದು ಮುಂದುವರೆಸಿದರು. ಅದಕ್ಕೆ ಪ್ರತಿಯಾಗಿ ಗುಂಪು ಕೂಡ 'ಜೈಶ್ರೀರಾಮ್' ಘೋಷಣೆ ಕೂಗತೊಡಗಿ ಆಕೆಯ ಹಿಂದೆ ತೆರಳಿತು. ಇದರಿಂದ ಕೆಲಕಾಲ ಶಿವಪ್ಪ ನಾಯಕ ವೃತ್ತದಲ್ಲಿ ಗೊಂದಲವೇರ್ಪಟ್ಟಿತು. ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಠಾಣೆಗೆ ಕರೆದೊಯ್ದರು.

ಇಲ್ಲಿನ ಶಿವಪ್ಪ ನಾಯಕ ವೃತ್ತದಲ್ಲಿ ಸೋಮವಾರ 'ಅಲ್ಲಾ ಹು ಅಕ್ಬರ್' ಎಂದು ಘೋಷಣೆ ಕೂಗಿದ ಮಹಿಳೆಗೆ ಮಾನಸಿಕ ಸ್ಥೀಮಿತ ಇಲ್ಲ ಎಂದು ಆಕೆಯ ತಂದೆ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com