ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಮತ್ತೆ ಮೂವರು ಅರೆಸ್ಟ್; ಬಂಧಿತರ ಸಂಖ್ಯೆ 14ಕ್ಕೆ ಏರಿಕೆ!

ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿದ್ದು, ಪ್ರಕರಣದಲ್ಲಿ  ಇದುವರೆಗೂ ಒಟ್ಟು 14 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published on

ಹಾವೇರಿ: ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿದ್ದು, ಪ್ರಕರಣದಲ್ಲಿ  ಇದುವರೆಗೂ ಒಟ್ಟು 14 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

26 ವರ್ಷದ ಇಸ್ಮಾಯಿಲ್ ಹುಬ್ಬಳ್ಳಿ, 27 ವರ್ಷದ ರಿಯಾಜ್ ಸವಿಕೆರೆ ಮತ್ತು 24 ವರ್ಷದ ನಿಯಾಜ್ ದರ್ಗಾ ಅವರನ್ನು ಭಾನುವಾರ ಬಂಧಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷ ಸರಣಿ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಸಂತ್ರಸ್ತೆ ಮತ್ತು ಪ್ರಕರಣವನ್ನೂ ಮುಚ್ಚಿಹಾಕುತ್ತಿದೆ ಎಂದು ಆರೋಪಿಸಿದ್ದರಿಂದ ರಾಜ್ಯ ಸರ್ಕಾರ ಒತ್ತಡಕ್ಕೆ ಸಿಲುಕಿತ್ತು.

ರಾಜ್ಯ ಬಿಜೆಪಿ ಘಟಕವು ಹಾವೇರಿಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಒಪ್ಪಿಸುವಂತೆ ಒತ್ತಾಯಿಸಿತ್ತು.

ನೈತಿಕ ಪೊಲೀಸ್‌ಗಿರಿಯ ಸಂತ್ರಸ್ತೆ ಜನವರಿ 11ರಂದು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ನನ್ನ ಮೇಲೆ  ಪದೇ ಪದೇ ಅತ್ಯಾಚಾರವೆಸಗಲಾಗಿದೆ ಎಂದು ಹೇಳಿದ್ದರು. ಜನವರಿ 8 ರಂದು ಹಾನಗಲ್ ಪಟ್ಟಣದಲ್ಲಿ ಅನ್ಯ ಧರ್ಮದ ವ್ಯಕ್ತಿಯೊಂದಿಗೆ ಕಾಣಿಸಿಕೊಂಡ ನಂತರ ಮಹಿಳೆಯನ್ನು ಹೋಟೆಲ್‌ನಿಂದ ಹೊರಗೆಳೆದು ಥಳಿಸಲಾಗಿದೆ ಎಂದು ಆರೋಪಿಸಲಾಗಿತ್ತು.

ತಾನು ಹೋಟೆಲ್‌ನಲ್ಲಿದ್ದಾಗ, ಐದರಿಂದ ಆರು ಜನರ ತಂಡವು ಒಳಗೆ ನುಗ್ಗಿ, ಪ್ರಶ್ನಿಸಿ ಬಲವಂತವಾಗಿ ತಮ್ಮ ಬೈಕ್‌ಗಳಲ್ಲಿ ಕರೆದೊಯ್ದರು ಎಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸಂತ್ರಸ್ತೆ ಹೇಳಿದ್ದಾರೆ.

ತನ್ನನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅಮಾನುಷವಾಗಿ ಹಲ್ಲೆ ನಡೆಸಿದರು ಮತ್ತು ನಂತರ ಎಲ್ಲರೂ ನನ್ನ ಮೇಲೆ ಅತ್ಯಾಚಾರ ಎಸಗಿದರು.  ಅನಂತರ ಕಾರಿಗೆ ಹತ್ತುವಂತೆ ಹೇಳಿ ಚಾಲಕ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಹೇಳಿದ್ದಾರೆ.

ಇಷ್ಟಕ್ಕೆ ನಿಲ್ಲಿಸದೇ  ಆಕೆಯನ್ನು ಎರಡು ಮೂರು ಸ್ಥಳಗಳಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಯಿತು. ಬಳಿಕ ಆರೋಪಿಗಳು ಆಕೆಯನ್ನು ರಾಷ್ಟ್ರೀಯ ಹೆದ್ದಾರಿಗೆ ಕರೆದೊಯ್ದು ಅಲ್ಲಿ ಬಸ್ ಹತ್ತಿಸಿದರು, ಅವರಿಗೆ ಶಿಕ್ಷೆಯಾಗಬೇಕೆಂದು ನಾನು ಬಯಸುತ್ತೇನೆ" ಎಂದು ಅವರು ಪೊಲೀಸರಿಗೆ ಮಾಡಿರುವ ಮನವಿಯಲ್ಲಿ ವೀಡಿಯೊದಲ್ಲಿ ಒತ್ತಾಯಿಸಿದ್ದಾರೆ.

ಸಂತ್ರಸ್ತೆಯ ಪತಿ ಕೂಡ ಮಾಧ್ಯಮದ ಮುಂದೆ ಹಾಜರಾಗಿ ತನ್ನ ಪತ್ನಿಯ ಮೇಲೆ  ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಅವರು ನನ್ನ ಹೆಂಡತಿಯನ್ನು ಅಪಹರಿಸಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಈ ಕ್ರೌರ್ಯವನ್ನು ಕುಟುಂಬದ ಸದಸ್ಯರೊಬ್ಬರ ಬಳಿ ಬಹಿರಂಗಪಡಿಸಿದ್ದಾಳೆ. ಆಕೆ ನನಗೆ ಹೇಳಲಿಲ್ಲಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com