ಬೀದರ್: ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; ಇಬ್ಬರ ಸಾವು, ಎಂಟು ಮಂದಿ ಅಸ್ವಸ್ಥ!

ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೊರವಲಯದಲ್ಲಿರುವ ಶ್ರೀ ಪ್ರಸನ್ನ ಪ್ರಿ-ಪ್ರೊಸೆಸಿಂಗ್ ಲಿಮಿಟೆಡ್ ಕಂಪನಿಯಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ವಿಷಾನಿಲ ಸೋರಿಕೆ
ವಿಷಾನಿಲ ಸೋರಿಕೆ

ಬೀದರ್: ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೊರವಲಯದಲ್ಲಿರುವ ಶ್ರೀ ಪ್ರಸನ್ನ ಪ್ರಿ-ಪ್ರೊಸೆಸಿಂಗ್ ಲಿಮಿಟೆಡ್ ಕಂಪನಿಯಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. 

ಕಳೆದ ರಾತ್ರಿ 9 ಗಂಟೆ ಸುಮಾರಿಗೆ ವಿಷಾನಿಲ ಸೋರಿಕೆಯಾಗಿದ್ದು ಹುಮನಾಬಾದ್ ತಾಲೂಕಿನ ವಡ್ಡನಕೇರಾ ಗ್ರಾಮದ ಮೊಹಮ್ಮದ್ ಶಾಬಾದ್ (21) ಮತ್ತು ಮಧ್ಯಪ್ರದೇಶದ ಇಂದ್ರಜೀತ್ (25) ಮೃತಪಟ್ಟಿದ್ದಾರೆ.

ಶ್ರೀ ಪ್ರಸನ್ನ ಪ್ರಿ-ಪ್ರೊಸೆಸಿಂಗ್ ಲಿಮಿಟೆಡ್ ಕಂಪನಿಯಲ್ಲಿ ಕೈಗಾರಿಕಾ ರಾಸಾಯನಿಕ ತ್ಯಾಜ್ಯವನ್ನು ಸಂಗ್ರಹಿಸಿ ಸಂಸ್ಕರಿಸಲಾಗುತ್ತದೆ. ಕಳೆದ ರಾತ್ರಿ ಯುವಕರು ಕಾರ್ಖಾನೆ ಪ್ರದೇಶದ ಗೋಡೌನ್‌ನಲ್ಲಿ ಕೈಗಾರಿಕೆಗಳಿಂದ ಸಂಗ್ರಹಿಸಲಾದ ರಾಸಾಯನಿಕ ತ್ಯಾಜ್ಯವನ್ನು ಟ್ಯಾಂಕರ್‌ಗಳಿಗೆ ಲೋಡ್ ಮತ್ತು ಅನ್‌ಲೋಡ್ ಮಾಡುತ್ತಿದ್ದರು. ಈ ವೇಳೆ ವಿಷಾನಿಲ ಸೋರಿಕೆಯಾಗಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ತಿಳಿಸಿದ್ದಾರೆ. ಕಾರ್ಖಾನೆಗಳು ಮತ್ತು ಬಾಯ್ಲರ್‌ಗಳ ನಿರೀಕ್ಷಕರು ಹಾಗೂ ಜಿಲ್ಲಾ ಮಾಲಿನ್ಯ ನಿಯಂತ್ರಣಾಧಿಕಾರಿಗಳು ವರದಿ ನೀಡಿದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿಷಾನಿಲ ವಾತಾವರಣಕ್ಕೆ ಸೇರಿಲ್ಲ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಗೋವಿಂದ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ವಿಷಾನಿಲ ಕಾರ್ಖಾನೆಯ ಮಿತಿಗಳಿಗೆ ಮಾತ್ರ ಸೀಮಿತವಾಗಿದೆ. ಮುಂದಿನ ಆದೇಶದವರೆಗೆ ಕಾರ್ಖಾನೆ ಮುಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ಡಿಎಸ್‌ಪಿ ಗೋವಿಂದರೆಡ್ಡಿ, ಕಾರ್ಖಾನೆ ಮತ್ತು ಬಾಯ್ಲರ್‌ಗಳ ನಿರೀಕ್ಷಕರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಭೇಟಿ ನೀಡಿದರು.

ಇನ್ನು ಘಟಕದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಜಿಲ್ಲೆಯ ವಿವಿಧ ಕೈಗಾರಿಕೆಗಳು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿರುವುದಾ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com