ತಿಂಗಳಾಂತ್ಯಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಇಂದಿರಾ ಕ್ಯಾಂಟೀನ್' ಕಾರ್ಯಾರಂಭ?

ತಿಂಗಳಾಂತ್ಯಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕೆಟ್ ಫ್ರೆಂಡ್ಲಿ 'ಇಂದಿರಾ ಕ್ಯಾಂಟೀನ್' ಕಾರ್ಯಾರಂಭಗೊಳ್ಳುವ ಸಾಧ್ಯತೆಗಳಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತಿಂಗಳಾಂತ್ಯಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕೆಟ್ ಫ್ರೆಂಡ್ಲಿ 'ಇಂದಿರಾ ಕ್ಯಾಂಟೀನ್' ಕಾರ್ಯಾರಂಭಗೊಳ್ಳುವ ಸಾಧ್ಯತೆಗಳಿವೆ.

ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ದೇಹವಹಳ್ಳಿಯ ವಿಮಾನ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆಯ ಕಾರ್ಯವನ್ನು ತೀವ್ರಗಳಿಸಲಾಗಿದ್ದು, ಟೆಂಡರ್ ಕರೆಯಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ವಿಮಾನ ನಿಸ್ಜಾಣದ ಪಾರ್ಕಿಂಗ್ ಏರಿಯಾ ಸಂಖ್ಯೆ 7 ರಲ್ಲಿ ಇಂದಿರಾ ಕ್ಯಾಂಟೀನ್ ನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ ಕೆಳ, ಮಧ್ಯಮ ವರ್ಗದವರು, ಮೇಲ್ಮಧ್ಯಮ ವರ್ಗದವರು ಮತ್ತು ದುಬಾರಿ ಆಹಾರವನ್ನು ಪಡೆಯಲು ಸಾಧ್ಯವಾಗದ ಕಾರ್ಮಿಕರಿಗೆ ಸಹಾಯವಾಗಲಿದೆ. ಕ್ಯಾಂಟೀನ್ ನಲ್ಲಿ ಅಗ್ಗದ ದರದಲ್ಲಿ ಆರೋಗ್ಯಕರ ಆಹಾರವನ್ನು ಸೇವನೆ ಮಾಡಬಹುದಾಗದೆ.

ಈ ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರತಿದಿನ ಸುಮಾರು 2,000 ಮಂದಿ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ಸೇವನೆ ಮಾಡಬಹುದು ಎಂದು ಮುಖ್ಯ ಆರೋಗ್ಯ ಅಧಿಕಾರಿ ಸಿರಾಜ್ ಅಹ್ಮದ್ ಮದನಿ ಅವರು ಹೇಳಿದ್ದಾರೆ.

ವಿಮಾನ ನಿಲ್ದಾಣದ ಆವರಣದಲ್ಲಿ ಕೈಗೆಟುಕುವ ದರದ ಆಹಾರಕ್ಕಾಗಿ ಓಲಾ, ಉಬರ್ ಮತ್ತು ಇತರ ಖಾಸಗಿ ಟ್ಯಾಕ್ಸಿ ಚಾಲಕರು ಪರದಾಡುತ್ತಿರುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಉಪಕ್ರಮವನ್ನು ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಿಬಿಎಂಪಿ ಮುಂದೆ ಪ್ರಸ್ತಾಪವಿಟ್ಟಿದ್ದರು. ಇದಕ್ಕೆ ಡಿಕೆ. ಶಿವಕುಮಾರ್ ಅವರು ಸ್ಪಂದನೆ ನೀಡಿದ್ದರು. ಇದರಂತೆ ಇಂದಿರಾ ಕ್ಯಾಂಟೀನ್ ನ್ನು ವಿಮಾನ ನಿಲ್ದಾಣದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ.

ನನ್ನ ಸಲಹೆಗಳನ್ನು ಸ್ವೀಕರಿಸಿದ್ದು, ಬಹಳ ಸಂತಸ ತಂತಿದೆ. ಈ ಉಪಕ್ರಮವು ಬಡ ಕ್ಯಾಬ್ ಚಾಲಕರು ಮತ್ತು ಕಾರ್ಮಿಕ ವರ್ಗಕ್ಕೆ ಪ್ರಯೋಜನವನ್ನು ನೀಡುತ್ತದೆ ಎಂದು ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com