ಕಲಬುರಗಿ: ಅಂಬೇಡ್ಕರ್ ಪುತ್ಥಳಿ ಧ್ವಂಸ ಪ್ರಕರಣದಲ್ಲಿ ನಾಲ್ವರ ಬಂಧನ 

ಕಲಬುರ್ಗಿಯಲ್ಲಿ ಅಂಬೇಡ್ಕರ್ ಪುತ್ಥಳಿ ಧ್ವಂಸ ಪ್ರಕರಣದಲ್ಲಿ ನಾಲ್ವರ ಬಂಧನವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಗೃಹ ಸಚಿವ ಡಾ. ಜಿ ಪರಮೇಶ್ವರ
ಗೃಹ ಸಚಿವ ಡಾ. ಜಿ ಪರಮೇಶ್ವರ

ಕಲಬುರ್ಗಿ: ಕಲಬುರ್ಗಿಯಲ್ಲಿ ಅಂಬೇಡ್ಕರ್ ಪುತ್ಥಳಿ ಧ್ವಂಸ ಪ್ರಕರಣದಲ್ಲಿ ನಾಲ್ವರ ಬಂಧನವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಘಟನೆಗೆ ಕಾರಣವೇನೆಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಘಟನೆಯ ಹಿಂದಿನ ಕಾರಣ ತಿಳಿದುಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ, ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. 

ಘಟನೆಯನ್ನು ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೃತ್ಯದ ಹಿಂದಿರುವ ವ್ಯಕ್ತಿಗಳ ಪಾತ್ರ ಹೊರಬಂದ ನಂತರ ಬಿಜೆಪಿ ಮೂಕಪ್ರೇಕ್ಷಕವಾಗಲಿದೆ. “ನಮಗೆ ಮಾಹಿತಿ ಇದ್ದರೂ ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಪುರಾವೆಗಳನ್ನು ಸಂಗ್ರಹಿಸಬೇಕಾಗಿದೆ ಮತ್ತು ನಾವು ಊಹೆ ಮಾಡುವುದಕ್ಕೆ ಸಾಧ್ಯವಿಲ್ಲ. ಈ ಕೃತ್ಯಕ್ಕೆ ಯೋಜನೆ ರೂಪಿಸಿದವರು ಯಾರು, ಏಕೆ ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ,'' ಎಂದು ಹೇಳಿದ್ದಾರೆ.

ಬಿ.ಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸದ ಪರಿಣಾಮ ಕಲಬುರಗಿ ನಗರ  ಉದ್ವಿಗ್ನವಾಗಿತ್ತು. ಡಿ ಕೋಟನೂರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ನಗರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com