ಅಪೂರ್ಣ ಮೇಲ್ಸೇತುವೆ ಶೀಘ್ರವೇ ಪೂರ್ಣಾ: ಪ್ರಜ್ವಲ್ ರೇವಣ್ಣ

ನಗರದಲ್ಲಿ ನರಸಿಂಹ ರಾಜ ವೃತ್ತ ಹಾಗೂ ಹೊಸ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹು ಅಗತ್ಯವಿರುವ ಮೇಲ್ಸೇತುವೆ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ಹಾಸನ: ನಗರದಲ್ಲಿ ನರಸಿಂಹ ರಾಜ ವೃತ್ತ ಹಾಗೂ ಹೊಸ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹು ಅಗತ್ಯವಿರುವ ಮೇಲ್ಸೇತುವೆ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

ವರದಿಗಾರರೊಂದಿಗೆ ಮಾತನಾಡಿರುವ ಪ್ರಜ್ವಲ್ ರೇವಣ್ಣ,  ಮೇಲ್ಸೇತುವೆ ಕಾಮಗಾರಿ ಅರ್ಧ ಮುಕ್ತಾಯವಾಗಿದೆ. ಅನುದಾನದ ಕಾರಣದಿಂದ, ರೈಲ್ವೆ ಟ್ರ್ಯಾಕ್ ಹಾಗೂ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ನಡುವಿನ ಪ್ರದೇಶದಲ್ಲಿ ಗುತ್ತಿಗೆದಾರ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ. ಸರಣಿ ಮನವಿಗಳ ಬಳಿಕವೂ ರಾಜ್ಯ ಸರ್ಕಾರ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ತಾವು ಈ ಯೋಜನೆ ಬಗ್ಗೆ ಕೇಂದ್ರ ರೈಲ್ವೆ ಸಚಿವರೊಂದಿಗೆ ಮಾತನಾಡಿದ್ದು ಸಚಿವರು ಸಮರೋಪಾದಿಯಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸುವುದಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

ರಾಜ್ಯ ಸರ್ಕಾರ ತನ್ನ ಅನುದಾನ ಬಿಡುಗಡೆ ಮಾಡಲು ವಿಫಲವಾದರೆ ಯೋಜನೆಗೆ ಅನುದಾನ ನೀಡುವುದಾಗಿ ಕೇಂದ್ರ ಭರವಸೆ ನೀಡಿದೆ. ಹುಬ್ಬಳ್ಳಿಯಲ್ಲಿ ಆಗ್ನೇಯ ರೈಲ್ವೆ ಪ್ರಧಾನ ವ್ಯವಸ್ಥಾಪಕರನ್ನು ಭೇಟಿ ಮಾಡಿದ್ದೇನೆ, ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ಮೇಲ್ದರ್ಜೆಗೇರಿಸುವುದು, ಮೊಸಳೆಹೊಸಹಳ್ಳಿ ರೈಲು ನಿಲ್ದಾಣ ಮೇಲ್ದರ್ಜೆಗೇರಿಸುವುದು, ಅರಸೀಕೆರೆಯಲ್ಲಿ ಒಂದೆ ಭಾರತ್ ರೈಲು ನಿಲುಗಡೆ ಸೇರಿದಂತೆ ಪ್ರಸ್ತಾವನೆಗಳ ಕುರಿತು ಚರ್ಚಿಸಿರುವುದಾಗಿ ಸಂಸದರು ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಿಂದ ತಾವೇ ಕಣಕ್ಕಿಳಿಯುವುದಾಗಿ ತಿಳಿಸಿರುವ ಪ್ರಜ್ವಲ್ ರೇವಣ್ಣಾ, ಅಭ್ಯರ್ಥಿ ವಿಚಾರದಲ್ಲಿ ಬಗ್ಗೆ ಯಾವುದೇ ಗೊಂದಲ ಬೇಡ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಈಗಾಗಲೇ ತಮ್ಮನ್ನು ಅಭ್ಯರ್ಥಿ ಎಂದು  ಘೋಷಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜೆಡಿಎಸ್ ಮತ್ತು ಬಿಜೆಪಿಯ ಹಿರಿಯ ನಾಯಕರು ಶೀಘ್ರದಲ್ಲೇ ಸಭೆ ನಡೆಸಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com